ದಾವಣಗೆರೆ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕೂಗು ಜೋರಾಗಿರುವ ನಡುವೆ ಕೆಲವು ಕಾಂಗ್ರೆಸ್ ಹಿರಿಯ ನಾಯಕರು ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇದೀಗ ಇನ್ನೋರ್ವ ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ತೆರೆ ಮೇಲೆ ಅಬ್ಬರಿಸಲು ‘ಬಘೀರ’ ರೆಡಿ! ನಟ ಶ್ರೀಮುರಳಿ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡುವೆ ಶಾಮನೂರು ಶಿವಶಂಕರಪ್ಪ ಅವರು ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ, ಹೈಕಮಾಂಡ್ ಆಶೀರ್ವಾದ ಇರುವವರೆಗೂ ಅವರೇ ಇರಲಿ. ಅಂಥ ಪ್ರಸಂಗ ಬಂದರೆ ಸಿಎಂ ಸ್ಥಾನಕ್ಕೆ ನಾನೂ ಸ್ಪರ್ಧೆ ಮಾಡುತ್ತೇನೆ, ಬಿಡುವುದಿಲ್ಲ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹೇಳಿದರು.
ರಾಜಕೀಯದಲ್ಲಿ ಜೂನಿಯರ್, ಸೀನಿಯರ್ ಪ್ರಶ್ನೆ ಬರುವುದಿಲ್ಲ. ಶಾಸಕರು ಬೆಂಬಲ ನೀಡಿದವರನ್ನು ಹೈಕಮಾಂಡ್ ಒಪ್ಪುತ್ತದೆ ಎಂದು ತಿಳಿಸಿದರು.
ಕೆಲವರು ಬಾಯಿಗೆ ಬಂದಂತೆ ಮಾತನಾಡಿಕೊಂಡು ಹೋಗುವುದರಿಂದ ಪ್ರಯೋಜನವಿಲ್ಲ. ಆ ಮಾತಿಗೆ ತೂಕ ಇರುವುದಿಲ್ಲ ಎಂದು ಹೇಳಿದರು.
ಹರಿಯಾಣ ವಿಧಾನಸಭಾ ಚುನಾವಣೆ: ನಾಮಪತ್ರ ಸಲ್ಲಿಸಿದ ಕುಸ್ತಿಪಟು ವಿನೇಶ್ ಫೋಗೇಟ್