More

    ಬರದ ಬಗ್ಗೆ ಗಮನಹರಿಸದಿದ್ದಲ್ಲಿ ಶಾಸಕರ ಮನೆಗೆ ಮುತ್ತಿಗೆ

    ಚಿಕ್ಕಮಗಳೂರು: ಜಿಲ್ಲೆಯಲ್ಲಿ ತೀವ್ರವಾದ ಬರಗಾಲ ಆವರಿಸಿದ್ದು ಯಾವುದೇ ಶಾಸಕರುಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ. ಇದೇ ಧೋರಣೆ ಮುಂದುವರೆದಲ್ಲಿ ೫ ಜನ ಶಾಸಕರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ ತಿಳಿಸಿದರು.

    ನಗರದ ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಳೆ ಇಲ್ಲದೆ ಜನ ಹಾಗೂ ಜಾನುವಾರುಗಳಿಗೆ ಕುಡಿಯಲು ನೀರು ಇಲ್ಲದಂತಾಗಿದೆ. ಹಸಿರು ಮೇವು ಸಿಗುತ್ತಿಲ್ಲ. ಚುನಾಯಿತ ಶಾಸಕರುಗಳು ಇದಕ್ಕೂ ನಮಗೂ ಏನು ಸಂಬAಧ ಇಲ್ಲವೆಂಬAತೆ ಕೇವಲ ಗ್ಯಾರಂಟಿ ಯೋಜನೆಗಳ ಭಜನೆ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ ಎಂದು ಆರೋಪಿಸಿದರು.
    ಬರ ಪರಿಸ್ಥಿತಿ ನಿಭಾಯಿಸಲು ನೀರು-ಮೇವು ಒದಗಿಸಲು ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಜಿಲ್ಲಾಡಳಿತ ಮತ್ತು ಜಿಲ್ಲಾಧಿಕಾರಿಗಳು ಬರ ಪರಿಸ್ಥಿತಿಗೆ ಸ್ಪಂದಿಸುತ್ತಿಲ್ಲ. ಈ ಜಿಲ್ಲೆಯ ಜಿಲ್ಲಾಧಿಕಾರಿಗಳು ಯಾರ ಹಿಡಿತದಲ್ಲಿಯೂ ಇಲ್ಲವೆಂಬAತಾಗಿದೆ ಎಂದು ದೂರಿದರು.
    ಜಾನುವಾರುಗಳಿಗೆ ಒಣಹುಲ್ಲು ದಾಸ್ತಾನು ಮಾಡಿರುವ ವಿವರ ನೀಡುತ್ತಿಲ್ಲ. ಹಸಿರು ಮೇವು ಎಲ್ಲೂ ಸಿಗುತ್ತಿಲ್ಲ. ಮೇವು ಬೆಳೆಯಲು ಜಿಲ್ಲಾಡಳಿತದಿಂದ ಬೀಜ ವಿತರಣೆ ಮಾಡುತ್ತಿಲ್ಲ. ಜನ-ಜಾನುವಾರುಗಳಿಗೆ ನೀರು-ಮೇವು ಇಲ್ಲದೆ ಹಾಹಾಕಾರ ಸೃಷ್ಠಿಯಾಗಿದೆ ಎಂದರು.
    ಪರಿಸ್ಥಿತಿ ಇಷ್ಟೊಂದು ತೀವ್ರವಾಗಿದ್ದರು ಸರ್ಕಾರ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಜಿಲ್ಲೆಯ ಐವರು ಶಾಸಕರು ಗಮನ ಹರಿಸುತ್ತಿಲ್ಲ. ಇದೇ ರೀತಿ ಮೌನವಾಗಿದ್ದರೆ ಜಾನುವಾರುಗಳ ಸಹಿತ ಶಾಸಕರುಗಳ ಮನೆ ಮುಂದೆ ವಿನೂತನ ಪ್ರತಿಭಟನೆ, ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು.
    ಕೇಂದ್ರ ಸರ್ಕಾರ ಬರ ಪರಿಹಾರದ ಹಣ ಬಿಡುಗಡೆ ಮಾಡದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ನಾಯಕರು ಈ ಬಗ್ಗೆ ಮಾತನಾಡಿದ್ದಾರೆ. ಹಿಂದೆ ಬಿ.ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ ಮೊದಲು ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಿ ನಂತರ ಕೇಂದ್ರ ಸರ್ಕಾರದ ಹಣ ಬಿಡುಗಡೆ ಆದ ಮೇಲೆ ಹೊಂದಾಣಿಕೆ ಮಾಡಿಕೊಳ್ಳಲಾಗುತಿತ್ತು. ಈಗಲೂ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಹಣಕ್ಕೆ ಕಾಯದೆ ತುರ್ತಾಗಿ ಹಣ ಬಿಡುಗಡೆ ಮಾಡಲಿ ಎಂದು ಒತ್ತಾಯಿಸಿದರು.
    ಜೂನ್ ೪ ರಂದು ನಡೆಯಲಿರುವ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ತಾವು ಆಕಾಂಕ್ಷಿಯಾಗಿದ್ದು, ಮಾಜಿ ಶಾಸಕ ಸಿ.ಟಿ ರವಿ ಸೇರಿದಂತೆ ಜಿಲ್ಲೆಯ ಮತ್ತು ರಾಜ್ಯದ ಪಕ್ಷದ ಮುಖಂಡರುಗಳಿಗೆ ಮನವಿ ಮಾಡಿಕೊಂಡಿರುವುದಾಗಿ ತಿಳಿಸಿದರು.
    ತಾವು ಒಬ್ಬ ಶಿಕ್ಷಕರ ಪುತ್ರನಾಗಿದ್ದು ಶಿಕ್ಷಕರ ಕಷ್ಟ ಸುಖಗಳನ್ನು ಸ್ವತಃ ಅರ್ಥ ಮಾಡಿಕೊಂಡಿz್ದೆÃನೆ. ತನಗೆ ಸ್ಪರ್ಧಿಸಲು ಪಕ್ಷ ಅವಕಾಶ ಮಾಡಿಕೊಟ್ಟರೆ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
    ಶಿಕ್ಷಕರ ಕ್ಷೇತ್ರದಿಂದ ಹಾಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಬೋಜೇಗೌಡ ಅವರು ಮೈತ್ರಿ ಅಭ್ಯರ್ಥಿ ಆಗುವರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಲ್ಮರುಡಪ್ಪನವರು ಅಂತಹ ಸಂದರ್ಭದಲ್ಲಿ ಪಕ್ಷದ ತೀರ್ಮಾನದಂತೆ ನಡೆದುಕೊಳ್ಳುವುದಾಗಿ ತಿಳಿಸಿದರು.
    ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಆರ್.ಪ್ರೇಮ್‌ಕುಮಾರ್, ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ ವೆಂಕಟೇಶ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕವೀಶ್, ಎಸ್.ಸಿ ಮೋರ್ಚಾ ಕಾರ್ಯದರ್ಶಿ ಮಂಜುನಾಥ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts