More

    ಛತ್ತೀಸ್​ಗಢದಲ್ಲಿ ನಾವು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಜಾತಿಗಣತಿ ನಡೆಸುತ್ತೇವೆ: ಪ್ರಿಯಾಂಕ ಗಾಂಧಿ

    ರಾಯ್​ಪುರ: ಛತ್ತೀಸ್​ಗಢದಲ್ಲಿ ಕಾಂಗ್ರೆಸ್​ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಬಿಹಾರದ ಮಾದರಿಯಲ್ಲೇ ಜಾತಿ ಗಣತಿ ನಡೆಸುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ವಾಗ್ದಾನ ಮಾಡಿದ್ದಾರೆ.

    ಛತ್ತೀಸ್​ಗಢದ ಬಸ್ತಾರ್​ ಭಾಗದಲ್ಲಿರುವ ಕಂಕೇರ್​ ಜಿಲ್ಲೆಯಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕ ಪ್ರಧಾನಿ ನರೇಂದ್ರ ಮೋದಿ ದೇಶದ ರೈತರನ್ನು ದುರ್ಬಲಗೊಳಿಸಿ ಶ್ರೀಮಂತರನ್ನು ಬಲಪಡಿಸುತ್ತಿದ್ಧಾರೆ ಎಂದು ಆರೋಪಿಸಿದ್ದಾರೆ.

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರೈತರನ್ನು ಸಂಪೂರ್ಣವಾಗಿ ದುರ್ಬಲಗೊಳಿಸಿದ್ದು, ಒಬ್ಬ ರೈತ ದಿನಕ್ಕೆ 27 ಗಳಿಸುತ್ತಿರುವುದು ದೊಡ್ಡ ವಿಚಾರವಾಗಿದೆ. ಆದರೆ, ಉದ್ಯಮಿಗಳಾದ ಅಂಬಾನಿ ಹಾಗೂ ಅದಾನಿ ದಿನಕ್ಕೆ 1,600 ಕೋಟಿ ರೂಪಾಯಿ ಗಳಿಸುತ್ತಿದ್ದಾರೆ. ದೇಶದ ಸಂಪತ್ತನ್ನು ಬಿಜೆಪಿ ಕೆಲವೇ ಕೆಲವು ಉದ್ಯಮಿಗಳಿಗೆ ನೀಡಲು ಬಿಜೆಪಿ ಬಯಸಿದೆ.

    ಇದನ್ನೂ ಓದಿ: ಸದೃಢ ರಾಷ್ಟ್ರಕ್ಕಾಗಿ ಬಿಜೆಪಿಯ ಹೋರಾಟ ಎಂದಿಗೂ ನಿಲ್ಲುವುದಿಲ್ಲ: ಜೆ.ಪಿ. ನಡ್ಡಾ

    ಬಿಜೆಪಿ ಸರ್ಕಾರ ಶ್ರೀಮಂತರ ಪರವಾಗಿದ್ದು, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಯಾವುದೇ ದೂರದೃಷ್ಟಿಯನ್ನು ಹೊಂದಿಲ್ಲ. ಪ್ರತಿ ಒಂದು ವಿಚಾರದಲ್ಲೂ ಬಿಜೆಪಿ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ. ಛತ್ತೀಸ್​ಗಢದಲ್ಲಿ ಕಾಂಗ್ರೆಸ್​ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಬಿಹಾರದ ಮಾದರಿಯಲ್ಲೇ ಜಾತಿ ಗಣತಿ ಮಾಡುತ್ತೇವೆ. ನಾವು ಪ್ರತಿಬಾರಿಯೂ ಜನರ ಹಕ್ಕುಗಳ ಬಗ್ಗೆ ಮಾತನಾಡಿದಾಗಲೆಲ್ಲಾ ಬಿಜೆಪಿಯವರು ವಿರೋಧ ಪಕ್ಷಗಳ ಬಾಯಿ ಮುಚ್ಚಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಈ ಹಿಂದೆ ಚುನಾವಣೆ ಸಮಯದಲ್ಲಿ ಪ್ರಧಾನಿ ಮೋದಿ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿದ್ದಾರಾ. ಪ್ರತಿಯೊಬ್ಬನ ನಾಗರೀಕರ ಖಾತೆಗೆ 15 ಲಕ್ಷ ರೂಪಾಯಿ ಜಮೆ ಮಾಡುತ್ತೇವೆ ಎಂದು ಹೇಳಿದ್ದರು. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದರು . ಆದರೆ, ಅವುಗಳಲ್ಲಿ ಯಾವುದಾದರು ಭರವಸೆಗಳನ್ನು ಈಡೇರಿಸಿದ್ದಾರಾ. ಈ ಪ್ರಶ್ನೆ ಕೇಳಿದಾಗಲೆಲ್ಲಾ ಅವರು ಜನರ ದಿಕ್ಕನ್ನು ತಪ್ಪಿಸುವ ಕೆಲಸ ಮಾಡಲಿದ್ದಾರೆ ಎಂದು ಪ್ರಿಯಾಂಕ ಗಾಂಧಿ ಛತ್ತೀಸ್​​ಗಢದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts