More

    ಪಂಪ್​ಸೆಟ್​ಗಳಿಗೆ ಮೀಟರ್ ಅಳವಡಿಸಲು ಮುಂದಾದರೆ ಕೈ, ಕಾಲು ಮುರಿಯುತ್ತೇವೆ

    ನರಗುಂದ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಕರಾಳ ಮೂರು ಕೃಷಿ ಕಾಯ್ದೆಗಳನ್ನು ಈಗಾಗಲೇ ಸಂಪೂರ್ಣ ರದ್ದುಪಡಿಸಿದೆ. ರಾಜ್ಯ ಸರ್ಕಾರ ವಿದ್ಯುತ್ ಖಾಸಗೀಕರಣಗೊಳಿಸಿ ರೈತರ ಮನೆ ಬಾಗಿಲಿಗೆ ಅಥವಾ ಪಂಪ್​ಸೆಟ್​ಗಳಿಗೆ ಮೀಟರ್ ಅಳವಡಿಸಲು ಬಂದರೆ ಅಧಿಕಾರಿಗಳ ಕೈ, ಕಾಲು ಮುರಿದು ಮನೆಗೆ ಕಳುಹಿಸಬೇಕಾಗುತ್ತದೆ ಎಂದು ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಎಚ್​ಆರ್. ಬಸವರಾಜಪ್ಪ ವಿವಾದಾತ್ಮಕ ಹೇಳಿಕೆ ನೀಡಿದರು.


    ಪಟ್ಟಣದಲ್ಲಿ ಮಹದಾಯಿ ಹೋರಾಟ ವೇದಿಕೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 43ನೇ ರೈತ ಹುತಾತ್ಮ ದಿನಾಚರಣೆ ಬಹಿರಂಗ ಸಮಾವೇಶದಲ್ಲಿ ಅವರು ಮಾತನಾಡಿದರು.


    ಕಳಸಾ ಬಂಡೂರಿ ಯೋಜನೆಗೆ ಆಗ್ರಹಿಸಿ ಉತ್ತರ ಕರ್ನಾಟಕದ ರೈತರು ಕಳೆದ 50 ವರ್ಷಗಳಿಂದ ನಿರಂತರ ಹೋರಾಟ ನಡೆಸಿಕೊಂಡು ಬಂದಿದ್ದಾರೆ. ಆದರೆ, ಎಲ್ಲ ರಾಜಕೀಯ ಪಕ್ಷದ ನಾಯಕರು ರೈತರ ಮೂಗಿಗೆ ತುಪ್ಪ ಒರೆಸುವ ಕೆಲಸ ಮಾಡಿದ್ದಾರೆ. ಹೀಗಾಗಿ ಈ ಸಮಸ್ಯೆ ಸಾಕಷ್ಟು ಜಟಿಲಗೊಂಡಿದೆ ಎಂದರು.



    ಹಕ್ಕೊತ್ತಾಯಗಳು:
    ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ತಕ್ಷಣವೇ ಹಿಂಪಡೆಯಬೇಕು. ರೈತರ ಮೇಲಿರುವ ಎಲ್ಲ ಕೇಸ್​ಗಳನ್ನು ರದ್ದುಪಡಿಸಬೇಕು. ಮಹದಾಯಿ, ಕಳಸಾ- ಬಂಡೂರಿ ಯೋಜನೆ ಕಾಮಗಾರಿಯನ್ನು ತಕ್ಷಣವೇ ಪ್ರಾರಂಭಿಬೇಕು. ಟನ್ ಕಬ್ಬಿಗೆ 4500 ರೂಪಾಯಿ, ಪ್ರತಿ ಕ್ವಿಂಟಲ್ ಕೊಬ್ಬರಿಗೆ 15 ಸಾವಿರ ರೂಪಾಯಿ ಬೆಲೆ ನಿಗದಿಪಡಿಸಿ ಕಾರ್ಖಾನೆಗಳಿಂದ ರೈತರಿಗೆ ಬರಬೇಕಾದ ಬಾಕಿ ಮೊತ್ತ ಪಾವತಿಸಬೇಕು. ಡಾ. ಸ್ವಾಮಿನಾಥನ್ ಆಯೋಗ ಜಾರಿಗೊಳಿಸಿ, ಪ್ರತಿಯೊಬ್ಬ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂಬಿತ್ಯಾದಿ 12 ಬೇಡಿಕೆಗಳ ಹಕ್ಕೊತ್ತಾಯಗಳನ್ನು ಮಂಡಿಸಿ, ಸಹಾಯಕ ಉಪ ವಿಭಾಗಾಧಿಕಾರಿ ಎಂ. ಗಂಗಪ್ಪ, ತಹಸೀಲ್ದಾರ ಎ.ಡಿ. ಅಮರವದಗಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.


    ವಿರೇಶ ಸೊಬರದಮಠ, ಬಸವರಾಜ ಸಾಬಳೆ, ವಿಠ್ಠಲ ಜಾಧವ, ಚನ್ನು ನಂದಿ, ಎಸ್.ಬಿ. ಜೋಗಣ್ಣವರ, ನಬೀಸಾಬ ಕಿಲ್ಲೇದಾರ, ಕಾಚಘಟ್ಟದ ಸಿದ್ಧವೀರಪ್ಪ, ನಜೀರಸಾಬ ಮೂಲಿಮನಿ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts