

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಆದರೆ ಅವರ ಕಾರ್ಯಕ್ರಮಕ್ಕೂ ಕೆಲ ಹೊತ್ತು ಮೊದಲೇ ಟ್ವಿಟ್ಟರ್ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿಗೆ ಸವಾಲೊಂದನ್ನು ಹಾಕಿದ್ದಾರೆ.
ನಿಮಗೆ ಧೈರ್ಯವಿದ್ದರೆ ಮನ್ ಕಿ ಬಾತ್ ಬದಲು ಕಿಸಾನ್ ಬಾತ್ ಮತ್ತು ಜಾಬ್ ಕಿ ಬಾತ್ ಕಾರ್ಯಕ್ರಮ ಮಾಡಿ ಅದರ ಬಗ್ಗೆ ಮಾತನಾಡಿ ಎಂದು ರಾಹುಲ್ ಗಾಂಧಿ ಟ್ವಿಟ್ಟರ್ನಲ್ಲಿ ಹೇಳಿದ್ದಾರೆ. ಕೇಂದ್ರದಲ್ಲಿ ವಿರೋಧಿ ಪಕ್ಷದ ಸ್ಥಾನದಲ್ಲಿರುವ ಕಾಂಗ್ರೆಸ್ ತನ್ನ ಸಾಮಾಜಿಕ ಜಾಲತಾಣಗಳ ಮೂಲಕ ಆಡಳಿತ ಪಕ್ಷವನ್ನು ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳಲಾರಂಭಿಸಿದೆ.
ಈ ಹಿಂದೆ ರೈತ ಹೋರಾಟದ ಕುರಿತಾಗಿಯೂ ರಾಹುಲ್ ಗಾಂಧಿಯವರು ಕೇಂದ್ರ ಸರ್ಕಾರದ ವಿರುದ್ಧ ಹರಿ ಹಾಯ್ದಿದ್ದರು. ಇದೀಗ ದೇಶದಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆ ಮತ್ತು ಹೆಚ್ಚುತ್ತಿರುವ ನಿರೋದ್ಯೋಗ ಸಮಸ್ಯೆಯ ಬಗ್ಗೆ ಕಾಂಗ್ರೆಸ್ ನಾಯಕರು ಕೇಂದ್ರವನ್ನು ಪ್ರಶ್ನೆ ಕೇಳಲಾರಂಭಿಸಿದ್ದಾರೆ. (ಏಜೆನ್ಸೀಸ್)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ