ರಾತ್ರಿ ಮಲಗುವ ಮುನ್ನ ಈ 5 ಕೆಲಸ ಮಾಡಿದ್ರೆ ಒಂದೇ ವಾರದಲ್ಲಿ ನಿಮ್ಮ ತೂಕ ಕಡಿಮೆಯಾಗುತ್ತದೆ.....

sleeping woman
ಸಾಂದರ್ಭಿಕ ಚಿತ್ರ
Published on

ಬೆಂಗಳೂರು:  ಆರೋಗ್ಯವೇ ಭಾಗ್ಯ ಎನ್ನುವ ಮಾತಿದೆ. ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಕೆಟ್ಟ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರದಿಂದ ಅನೇಕ ಜನರನ್ನು ತೂಕದ ಸಮಸ್ಯೆ ಕಾಡುತ್ತಿದೆ. ಆಧುನಿಕ ಕಾಲದಲ್ಲಿ ಹೆಚ್ಚಿನ ಜನರು ಸ್ಥೂಲಕಾಯತೆಯಿಂದ ಬಳಲುತ್ತಿದ್ದಾರೆ ಎಂದು ವೈದ್ಯಕೀಯ ತಜ್ಞರು ಹೇಳುತ್ತಾರೆ. 

ನೀವು ಆಹಾರಕ್ರಮ ಮತ್ತು ವ್ಯಾಯಾಮದ ಹೊರತಾಗಿಯೂ ತೂಕವನ್ನು ಕಳೆದುಕೊಳ್ಳಲು ಸಾಧ್ಯವಾಗದಿದ್ದರೆ, ಚಿಂತಿಸಬೇಕಾಗಿಲ್ಲ. ಏಕೆಂದರೆ ನೀವು ಸುಲಭವಾಗಿ ನಿಮ್ಮ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ರಾತ್ರಿ ಮಲಗಲು ಈ ಕೆಲಸ ಮಾಡಿ ಸಾಕು...

1) ತಡವಾಗಿ ಆಹಾರ ಸೇವಿಸುವುದರಿಂದ ಆಹಾರ ಸರಿಯಾಗಿ ಜೀರ್ಣವಾಗದೆ ಬೊಜ್ಜು ಹೆಚ್ಚಾಗಲು ಪ್ರಾರಂಭಿಸುತ್ತದೆ. ಆದ್ದರಿಂದ, ಸರಿಯಾದ ಸಮಯಕ್ಕೆ ಆಹಾರ ಸೇವನೆ ಮಾಡಿ.

2) ರಾತ್ರಿಯ ಊಟ ಯಾವಾಗಲೂ ಹಗುರವಾಗಿರಬೇಕು. ಸಲಾಡ್, ಸೂಪ್, ದಾಲ್, ರೊಟ್ಟಿಯನ್ನು ನಿಮ್ಮ ರಾತ್ರಿಯ ಊಟದಲ್ಲಿ ಸೇರಿಸಿಕೊಳ್ಳಬಹುದು. ಇದರಿಂದ ನಿಮಗೆ ಬೇಗ ಹಸಿವಾಗುವುದಿಲ್ಲ.. ಜೊತೆಗೆ ನಿಮ್ಮ ತೂಕವೂ ನಿಯಂತ್ರಣದಲ್ಲಿರುತ್ತದೆ.

3) ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ ರಾತ್ರಿ ಊಟದ ನಂತರ ಬಿಸಿ ನೀರು ಕುಡಿಯಿರಿ. ಹೀಗೆ ಮಾಡುವುದರಿಂದ ಆಹಾರ ಸುಲಭವಾಗಿ ಜೀರ್ಣವಾಗುತ್ತದೆ.

4) ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ನೀವು ಪ್ರತಿದಿನ ಉತ್ತಮ ನಿದ್ರೆ ಮಾಡುವ ಅಭ್ಯಾಸ ರೂಢಿಸಿಕೊಳ್ಳಬೇಕು. 7 ರಿಂದ 8 ಗಂಟೆಗಳ ಕಾಲ ನಿದ್ರೆ ಮಾಡಿ.

5)ಅರಿಶಿನ ಹಾಲು ಕುಡಿಯುವುದು ತೂಕ ನಷ್ಟಕ್ಕೆ ತುಂಬಾ ಉಪಯುಕ್ತವಾಗಿದೆ. ಹಾಲು, ಹಣ್ಣು   ಸೇವಿಸುವ ಅಭ್ಯಾಸ ರೂಢಿಸಿಕೊಳ್ಳಬೇಕು.

ಗಮನಿಸಿ: ಈ ಮಾಹಿತಿಯನ್ನು ತಜ್ಞರು ಮತ್ತು ಅಧ್ಯಯನಗಳಿಂದ ಸಂಗ್ರಹಿಸಲಾಗಿದೆ. ಈ ಲೇಖನವು ಜಾಗೃತಿಗಾಗಿ ಮಾತ್ರ. ಯಾವುದೇ ಸಣ್ಣ ಆರೋಗ್ಯ ಸಮಸ್ಯೆಗಳಿಗೆ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net