ಸೋತಾಗ ಕುಗ್ಗದೆ, ಗೆದ್ದಾಗ ಹಿಗ್ಗದಿದ್ದರೆ ಸಾಧನೆ: ಯತೀಶ್​ ಬಾನಡ್ಕ ಅಭಿಮತ

Kdb_win-loss
Published on

ಕಡಬ: ಸೋತಾಗ ಕುಗ್ಗದೆ, ಗೆದ್ದಾಗ ಹಿಗ್ಗದೆ ಇರುವ ಮನೋಭಾವ ಬೆಳೆಸಿಕೊಳ್ಳಬೇಕು. ಆಗ ಸಾಧಕ ಕ್ರೀಡಾಪಟುವಾಗಲು ಸಾಧ್ಯ ಎಂದು ರಾಮಕುಂಜ ಗ್ರಾಮ ಪಂಚಾಯಿತಿ ಸದಸ್ಯ ಯತೀಶ್​ ಬಾನಡ್ಕ ಹೇಳಿದರು.

ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಕಡಬ ತಾಲೂಕುಮಟ್ಟದ ಪದವಿಪೂರ್ವ ಬಾಲಕ ಮತ್ತು ಬಾಲಕಿಯರ ಖೋ&ಖೋ ಪಂದ್ಯಾಟ ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿದರು.

ಭಾರತೀಯ ಸೇನೆಯ- ಸೈನಿಕ ಜಯಪ್ರಕಾಶ್​ ಮತ್ತು ಬೆಥನಿ ಪದವಿಪೂರ್ವ ಕಾಲೇಜಿನ ಪುನೀತ್​ ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್​ ಕೆ.ಸ್ವಾಗತಿಸಿದರು. ಉಪನ್ಯಾಸಕ ಚೇತನ್​ ಎಂ. ನಿರೂಪಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕ ಗಣೇಶ್​ ಕೆ. ವಂದಿಸಿದರು.

ಬಾಲಕರ ವಿಭಾಗದಲ್ಲಿ ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ, ಬೆಥನಿ ಪದವಿಪೂರ್ವ ಕಾಲೇಜು ನೂಜಿಬಾಳ್ತಿಲದ ವಿದ್ಯಾರ್ಥಿಗಳು ದ್ವೀತಿಯ ಸ್ಥಾನ ಗಳಿಸಿದರು. ಬಾಲಕಿಯರ ವಿಭಾಗದಲ್ಲಿ ಬೆಥನಿ ಪದವಿಪೂರ್ವ ಕಾಲೇಜು ನೂಜಿಬಾಳ್ತಿಲದ ವಿದ್ಯಾರ್ಥಿನಿಯರು ಪ್ರಥಮ, ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವೀತಿಯ ಸ್ಥಾನ ಗಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net