

ಕೋಟ: ಬದುಕು ನಿಂತ ನೀರಾಗಿರದೇ ಸಾಧಿಸುವ ಛಲ ಇರಬೇಕು. ಜತೆಗೆ ಪ್ರಯತ್ನದಿಂದ ಸಾಧನೆಯ ಮೆಟ್ಟಿಲು ಹತ್ತಲು ಸುಲಭವಾಗುತ್ತದೆ ಎಂದು ಡಾ.ಶಿವರಾಮ ಕಾರಂತ ಪ್ರತಿಷ್ಠಾನ ಕಾರ್ಯಾಧ್ಯಕ್ಷ ಆನಂದ್ ಸಿ. ಕುಂದರ್ ಹೇಳಿದರು.
ಕೋಟದ ಡಾ.ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಡಾ.ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಪಂ ಕೊಡಮಾಡುವ ಚಿತ್ರನಟ ಡಾ.ರಮೇಶ್ ಅರವಿಂದ್ ಪ್ರಾಯೋಜಿತ ದತ್ತಿ ಪುರಸ್ಕಾರವನ್ನು ಪೃಥ್ವೀಶ್ ಭಟ್, ರವೀಂದ್ರ ಶೆಟ್ಟಿ ತಂತ್ರಾಡಿ ಅವರಿಗೆ ಪ್ರದಾನ ಮಾಡಿ ಮಾತನಾಡಿದರು.
ಕೋಟತಟ್ಟು ಗ್ರಾಪಂ ಅಧ್ಯಕ್ಷ ಕೆ.ಸತೀಶ್ ಕುಂದರ್, ಯಕ್ಷಗಾನ ಪ್ರಸಂಗಕರ್ತ ವಿಷ್ಣುಮೂರ್ತಿ ನಾಯಕ್ ಬೇಳೂರು, ಗೋವಿಗಾಗಿ ಮೇವು ಅಭಿಯಾನ ಸಂಚಾಲಕ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಬ್ರಹ್ಮ ಶ್ರೀ ನಾರಾಯಣಗುರು ಸೇವಾ ಸಂಘ ಕೋಟ ಅಧ್ಯಕ್ಷ ಸದಾನಂದ ಜಿ, ಕೋಟ ಗ್ರಾಪಂ ಸದಸ್ಯ ಚಂದ್ರ ಪೂಜಾರಿ, ಗುತ್ತಿಗೆದಾರ ಸುರೇಶ್ ಗಾಣಗ ಶೇವಧಿ, ಉದ್ಯಮಿ ಶ್ರೀ ಕಿರಣ್ ತೆಕ್ಕಟ್ಟೆ, ಬಾಳೆಬೆಟ್ಟು ಫ್ರೆಂಡ್ಸ್ ಬಾಳೆಬೆಟ್ಟು ಅಧ್ಯಕ್ಷ ರತ್ನಾಕರ ಪೂಜಾರಿ, ಯಕ್ಷಸುಮನಸ ಕಲಾರಂಗ ಅಧ್ಯಕ್ಷ ಶ್ರೀಪ್ರಸಾದ್ ಬಿಲ್ಲವ ಉಪಸ್ಥಿತರಿದ್ದರು. ಶಿಕ್ಷಕ ಸತೀಶ್ ವಡ್ಡರ್ಸೆ ನಿರೂಪಿಸಿದರು. ಕಾರಂತ ಪ್ರತಿಷ್ಠಾನ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪ್ರಾಸ್ತಾವಿಸಿದರು. ಕೋಟತಟ್ಟು ಪಿಡಿಒ ರವೀಂದ್ರ ರಾವ್ ವಂದಿಸಿದರು.