More

    ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿದರೆ ಉನ್ನತ ಸ್ಥಾನ

    ಚಿಕ್ಕಮಗಳೂರು: ಪ್ರಾಮಾಣಿಕತೆ, ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿದರೆ ಮುಂದಿನ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬಹುದು ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.
    ನಗರದ ಬಸವನಹಳ್ಳಿ ಬಾಲಿಕಾ ಸರ್ಕಾರಿ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವ ಸಮಾರೋಪ ಸಮಾರಂಭವನ್ನು ಶನಿವಾರ ಉದ್ಘಾಟಿಸಿ ಮಾತನಾಡಿ, ಡಾ.ಬಿ.ಆರ್ ಅಂಬೇಡ್ಕರ್ ಹೇಳಿದಂತೆ ಕೇವಲ ಮಾತು, ಭಾಷಣಗಳಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ. ಸಾಮಾಜಿಕ, ಆರ್ಥಿಕವಾಗಿ ಎಲ್ಲರಿಗೂ ಶಕ್ತಿ ತುಂಬಿದಾಗ ಮಾತ್ರ ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದಕ್ಕೆ ಸಾರ್ಥಕ ಮಾಗಲಿದೆ ಎಂದರು.
    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಕುವೆಂಪು ಜನಿಸಿದ ಜಿಲ್ಲೆಯಲ್ಲಿ ಜನಿಸಿರುವ ನಾವುಗಳು ಸ್ವಾಮಿ ವಿವೇಕಾನಂದ, ಡಾ. ಬಿ.ಆರ್.ಅಂಬೇಡ್ಕರ್ ಅವರ ಜೀವನ ಚರಿತ್ರೆಗಳನ್ನು ಅಧ್ಯಯನ ಮಾಡಿ ಅವರ ವಿಚಾರಧಾರೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಚರಿತ್ರೆಯಲ್ಲಿ ಸೋಲು-ಗೆಲುವು ಸಾಮಾನ್ಯ.ಗೆದ್ದವರಿಗೆ ವಿಜೇತ , ಸೋತವರನ್ನು ವೀರರೊಂದಿಗೆ ಹೋರಾಡಿ ಸೋತ ಎನ್ನುತ್ತಾರೆ. ಆದರೆ ಸುಮ್ಮನೆ ಕುಳಿತು ಕಾಲ ಹರಣ ಮಾಡುವವರಿಗೆ ಈ ಎರಡೂ ಸ್ಥಾನಗಳು ಸಿಗುವುದಿಲ್ಲ ಎಂದರು.
    ನಗರಸಭಾಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಮಾತನಾಡಿ, ಸರ್ಕಾರಿ ಶಾಲಾ ಕಾಲೇಜುಗಳಿಗೆ ನಗರಸಭೆಯಿಂದ ಶೌಚಗೃಹ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಎಸ್‌ಡಿಎಂಸಿ ಮಂಡಳಿ ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಿದಾಗ ಶಾಲೆ, ಕಾಲೇಜುಗಳ ಅಭಿವೃದ್ಧಿ ಸಾಧ್ಯ ಎಂದರು.
    ಉಪನ್ಯಾಸರಾದ ಡಾ.ಎಚ್.ಎಸ್.ಸತ್ಯನಾರಾಯಣ, ಉಪ ನಿರ್ದೇಶಕ ಪುಟ್ಟನಾಯಕ್,ಚಂದ್ರಮೌಳಿ, ನಿವೃತ್ತ ಪ್ರಾಚಾರ್ಯ ಎಸ್.ಜಿ ಸಾವಿತ್ರಿ, ಜೆ.ಎಸ್.ದಯಾನಂದ್, ಶಭಾನಬಾನು, ನಾಗರಾಜ್ ಎಂ.ಆರ್, ಕಿರಣ್ ಜಿ.ಪಿ. ಸುರೇಶ್, ಬಿ.ಕೆ ಜಾಹ್ನವಿ, ಪುರುಷೋತ್ತಮ, ಶಂಕರ್ ನಾಯ್ಕ, ಲೋಹಿತ್, ದರ್ಶನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ ಮಂಜೇಗೌಡ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts