More

    ಇಗ್ನೋ ಪ್ರವೇಶಾತಿ ಆರಂಭ

    ಬೆಂಗಳೂರು ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯವು (ಇಗ್ನೋ) 2024ನೇ ಸಾಲಿನ ಸ್ವಾತಕ, ಸ್ನಾತಕೋತ್ತರ, ಪಿಜಿ ಡಿಪ್ಲೊಮೊ ಮತ್ತು ಪ್ರಮಾಣಪತ್ರ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನಿಸಿದೆ.

    ರಸಾಯನಶಾಸ, ಜೀವ ರಸಾಯನಶಾಸ, ವಿಶ್ಲೇಷಣಾತ್ಮಕ ರಸಾಯನಶಾಸ, ಪ್ರಾಣಿಶಾಸ, ಜನಸಂಖ್ಯೆ ಮತ್ತು ಕುಟುಂಬ ಆರೋಗ್ಯ ಅಧ್ಯಯನಗಳು, ಪತ್ರಿಕೋದ್ಯಮ ಮತ್ತು ಡಿಜಿಟಲ್ ಮಾಧ್ಯಮ ಎಂಬ ಹಲವು ಕೌಶಲ ಅಭಿವೃದ್ಧಿ ಕೋರ್ಸ್‌ಗಳನ್ನು ಒಳಗೊಂಡಿವೆ. ಕಲೆ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಕೋರ್ಸ್‌ಗಳಿಗೆ ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ ಎಂದು ಇಗ್ನೊ ಹಿರಿಯ ಪ್ರಾದೇಶಿಕ ನಿರ್ದೇಶಕಿ ಡಾ. ಎಸ್. ರಾಧಾ ತಿಳಿಸಿದ್ದಾರೆ.

    ಪರಿಶಿಷ್ಟ ಜಾತಿ, ಪಂಗಡ ಮತ್ತು ಅಂಗವಿಕಲರಿಗೆ ವಿದ್ಯಾರ್ಥಿವೇತನ ಮತ್ತು ಶುಲ್ಕ ಮರುಪಾವತಿ ಅವಕಾಶ ನೀಡಲಾಗಿದೆ. ಎಸ್‌ಸಿಪಿ ಮತ್ತು ಟಿಎಸ್‌ಪಿ ಅಡಿ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗುತ್ತಿದೆ.

    ವಿದ್ಯಾರ್ಥಿಗಳು ವಿದ್ಯಾಲಕ್ಷ್ಮಿ ಪೋರ್ಟಲ್ ಮೂಲಕ ಶಿಕ್ಷಣ ಸಾಲ ಸೌಲಭ್ಯವನ್ನು ಪಡೆಯಬಹುದು. ಎಐಸಿಟಿಇ ಪರಿಷ್ಕೃತ ಮಾನದಂಡಗಳ ಪ್ರಕಾರ ಪರೀಕ್ಷೆ ಇಲ್ಲದೆ ಎಂಬಿಎ ಪ್ರವೇಶ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts