More

    ಐಐಐಟಿಗೆ ರಾಷ್ಟ್ರೀಯ ಸಂಸ್ಥೆಗಳ ಸ್ಥಾನ ನೀಡುವ ವಿಧೇಯಕ ರಾಜ್ಯಸಭೆಯಲ್ಲಿ ಅಂಗೀಕಾರ

    ರಾಯಚೂರು: ನಗರ ಸೇರಿ ದೇಶದ 5 ಕಡೆಗಳಲ್ಲಿ ಸ್ಥಾಪನೆಯಾಗಿರುವ ಐಐಐಟಿಗಳಿಗೆ ರಾಷ್ಟ್ರೀಯ ಸಂಸ್ಥೆಗಳ ಸ್ಥಾನ ನೀಡುವ ವಿಧೇಯಕ ಮಂಗಳವಾರ ರಾಜ್ಯಸಭೆಯಲ್ಲಿ ಅಂಗೀಕಾರವಾಗಿರುವುದರಿಂದ ಇಲ್ಲಿನ ಐಐಐಟಿಗೆ ಕಾರ್ಯ ಚಟುವಟಿಕೆಗೆ ಹೆಚ್ಚಿನ ಚಾಲನೆ ಸಿಕ್ಕಂತಾಗಿದೆ.

    ಕಳೆದ ಶೈಕ್ಷಣಿಕ ವರ್ಷದಿಂದ ಈಗಾಗಲೇ ಹೈದರಾಬಾದ್ ಐಐಟಿಯಲ್ಲಿ ರಾಯಚೂರು ಐಐಐಟಿಯ ತರಗತಿಗಳನ್ನು ಆರಂಭಿಸಲಾಗಿದ್ದು, 30 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ವಡವಾಟಿ ಹತ್ತಿರ ಐಐಐಟಿ ಸ್ಥಾಪನೆಗೆ ಸ್ಥಳ ಗುರುತಿಸಲಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸ್ಥಳೀಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಟ್ಟಡದಲ್ಲಿ ತರಗತಿ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

    ಮಾರ್ಚ್‌ನಲ್ಲಿ ಲೋಕಸಭೆಯಲ್ಲಿ ಐಐಐಟಿಗಳಿಗೆ ರಾಷ್ಟ್ರೀಯ ಸ್ಥಾನಮನಾನ ನೀಡುವ ವಿಧೇಯಕಕ್ಕೆ ಅಂಗೀಕಾರ ಸಿಕ್ಕಿತ್ತು. ಬುಧವಾರ ರಾಜ್ಯಸಭೆಯಲ್ಲಿ ಅಂಗೀಕಾರ ದೊರೆತಿರುವುದರಿಂದ ಐಐಐಟಿಗಳಿಗೆ ಪದವಿಯಿಂದ ಹಿಡಿದು ಪಿಎಚ್‌ಡಿವರೆಗೆ ವಿವಿಧ ಉನ್ನತ ಶಿಕ್ಷಣಗಳ ಪದವಿ ನೀಡುವ ಕಾನೂನುಬದ್ಧ ಅರ್ಹತೆ ಸಿಕ್ಕಂತಾಗಿದೆ.

    ರಾಯಚೂರು ಐಐಐಟಿಗೆ ರಾಷ್ಟ್ರೀಯ ಸಂಸ್ಥೆ ಸ್ಥಾನಮಾನ ದೊರೆತಿರುವುದು ಸಂಸ್ಥೆಯ ಚಟುವಟಿಕೆಗಳಿಗೆ ಹೆಚ್ಚಿನ ಚಾಲನೆ ಸಿಕ್ಕಂತಾಗಿದೆ. ಇದರಿಂದ ರಾಯಚೂರಿನ ಶೈಕ್ಷಣಿಕ ಕ್ಷೇತ್ರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಗೌರವಕ್ಕೆ ಪಾತ್ರವಂತಾಗಿದೆ. ಕೇಂದ್ರ ಯಶಸ್ವಿಯಾಗಿ ಕಾರ್ಯನಿರ್ವಹಿಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಕ್ಕೆ ಸರ್ಕಾರ ಬದ್ಧವಾಗಿದೆ.
    | ಲಕ್ಷ್ಮಣ ಸವದಿ, ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts