More

    ಕೇಂದ್ರ ಸರ್ಕಾರದ ವಿರುದ್ಧ ರೈತರ ಆಕ್ರೋಶ

    ಇಳಕಲ್ಲ: ಸಂಸತ್ತಿನ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಅಂಗೀಕರಿಸಿರುವ ದಾಸ್ತಾನು ಸಂಗ್ರಹಿಸುವ ಸ್ವತಂತ್ರ ಕಾಯ್ದೆ, ಗುತ್ತಿಗೆ ಕೃಷಿ ಕಾಯ್ದೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆಗಳನ್ನು ರಾಜ್ಯದಲ್ಲಿ ಜಾರಿಗೆ ತರಬಾರದು, ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಇಲ್ಲಿನ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಘಟಕದ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.

    ನಗರದ ಹೊರ ವಲಯದ ರಾಜ್ಯ ಹೆದ್ದಾರಿ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದರು. ನಂತರ ತಹಸೀಲ್ದಾರ್ ವೇದವ್ಯಾಸ ಮುತಾಲಿಕ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

    ಕೇಂದ ಸರ್ಕಾರ ತರಕಾರಿ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಿದಂತೆ ನಮ್ಮ ರಾಜ್ಯದಲ್ಲೂ ಬೆಂಬಲ ಬೆಲೆ ಘೋಷಿಸಬೇಕು. ವಿದ್ಯುತ್ ಕಾಯ್ದೆ ತಿದ್ದುಪಡಿಯಿಂದ ಮುಂದಿನ ದಿನಗಳಲ್ಲಿ ರೈತರು ಕೃಷಿ ಮಾಡುವುದನ್ನೇ ಬಿಡುತ್ತಾರೆ. ಹಾಗಾಗಿ ವಿದ್ಯುತ್ ಕಾಯ್ದೆಯನ್ನು ಕೂಡಲೇ ವಾಪಸ್ ಪಡೆಯಬೇಕು. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಸಾಕಷ್ಟು ಪ್ರಮಾಣದ ಬೆಳೆ ಹಾನಿಯಾಗಿ ರೈತರು ಸಂಕಷ್ಟು ಎದುರಿಸುತ್ತಿದ್ದಾರೆ. ತಕ್ಷಣ ಅವರಿಗೆ ಪರಿಹಾರ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಗೆ ಒತ್ತಾಯಿಸಿದರು.

    ರಾಜ್ಯ ರೈತ ಸಂಘ, ಹಸಿರು ಸೇನೆ ಘಟಕದ ತಾಲೂಕು ಅಧ್ಯಕ್ಷ ಮೋಸಿನ್‌ಸಾಬ ನದಾಫ್, ಪ್ರಧಾನ ಕಾರ್ಯದರ್ಶಿ ರಸೂಲ್‌ಸಾಬ ತಹಸೀಲ್ದಾರ್, ಜಿಲ್ಲಾ ಉಪಾಧ್ಯಕ್ಷ ಶಶಿಕಾಂತ ಬಂಡರಗಲ್ಲ, ತಾಲೂಕು ಘಟಕದ ಕಾರ್ಯಾಧ್ಯಕ್ಷ ಗುರು ಗಾಣಿಗೇರ, ವಿಷ್ಣು ರಜಪೂತ, ಮಹಾಲಿಂಗಪ್ಪ ಅವಾರಿ ಸೇರಿ ಪದಾಧಿಕಾರಿಗಳು, ಸದಸ್ಯರು, ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    ಸಂಚಾರ ಅಸ್ತವ್ಯಸ್ತ
    ಹುಬ್ಬಳ್ಳಿ, ಮಂಗಳೂರು ರಾಜ್ಯ ಹೆದ್ದಾರಿ ಸಂಚಾರ ಬಂದ್ ಮಾಡಿದ್ದರಿಂದ ಕೆಲ ಗಂಟೆ ವಾಹನ ಸಂಚಾರ ಸ್ಥಗಿತಗೊಂಡಿತ್ತು. ವಾಹನ ಸವಾರರು ಪರದಾಡುವಂತಾಯಿತು. ಮುಂಜಾಗ್ರತಾ ಕ್ರಮವಾಗಿ ಪಿಎಸ್‌ಐ ರಮೇಶ ಜಲಗೇರಿ ನೇತೃತ್ವದಲ್ಲಿ ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts