18.1 C
Bangalore
Saturday, December 7, 2019

ಸಮಾಜ ಸಂಘಟನೆಗೆ ಒಗ್ಗಟ್ಟು ಅಗತ್ಯ

Latest News

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಶ್ರೀಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಬಾಗಲಕೋಟೆ: ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಶ್ರೀಕೃಷ್ಣನ ನೀಡಿದ ಗೀತೋಪದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಉಡುಪಿ ಶ್ರೀಕೃಷ್ಣಮಠದ ಭಾವಿ ಪರ್ಯಾಯ ಪೀಠಾಧೀಶ, ಅದಮಾರು ಶ್ರೀ ಈಶಪ್ರಿಯತೀರ್ಥ...

ಇಳಕಲ್ಲ: ಇಂದಿನ ಸಮಾಜದ ಕಲುಷಿತ ವಾತಾವರಣದಲ್ಲಿ ಬಣಜಿಗ ಸಮಾಜದ ಸ್ವಾಭಿಮಾನಕ್ಕೆ ಧಕ್ಕೆ ಆಗದಂತೆ ಸಂಘಟನೆ ಮಾಡಲು ಎಲ್ಲರೂ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಬಾಗಲಕೋಟೆ ಬಸವೇಶ್ವರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಹೇಳಿದರು.

ನಗರದ ಅನುಭವ ಮಂಟಪದಲ್ಲಿ ಹಮ್ಮಿಕೊಂಡಿದ್ದ ನಗರ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ, ನೌಕರರ ಸಂಘ, ಮಹಿಳಾ ಸಂಘ, ಯುವ ಘಟಕಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಬಣಜಿಗ ಸಮಾಜದ 14 ಹಾಗೂ 15ನೇ ವಾರ್ಷಿಕ ಮಹಾಸಭೆ ಹಾಗೂ ವಿಶ್ವಸ್ಥ ಮಂಡಳಿಯ ಮಹನೀಯರಿಗೆ ಗೌರವ ಸತ್ಕಾರ, ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಇತರ ಸಮಾಜದೊಂದಿಗೆ ಪ್ರೀತಿ, ವಿಶ್ವಾಸ, ಸೌಹಾರ್ದತೆಯಿಂದ ಕೂಡಿಕೊಂಡು ನಮ್ಮ ಸಮಾಜವನ್ನು ಕಟ್ಟಿ, ಬೆಳೆಸಿ ಮಾದರಿ ಸಮಾಜವನ್ನಾಗಿ ಮಾಡಬೇಕು ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಾ. ಶಿವಬಸಪ್ಪ ಹೆಸರೂರ, ಬಣಜಿಗ ಸಮಾಜದ ಸಂಘಟನೆ ಇಡೀ ಮನಕುಲಕ್ಕೆ ಒಳಿತನ್ನು ಬಯಸುತ್ತದೆ. ಬಣಜಿಗ ಸಮಾಜದ ಸಂಸ್ಕೃತಿ, ಸಂಸ್ಕಾರ ಹಾಗೂ ಇತಿಹಾಸ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

ಶಿರೋಳ ರಾಮಾರೂಢ ಮಠದ ಶಂಕರಾರೂಢ ಶ್ರೀಗಳು ಸಾನ್ನಿಧ್ಯ ವಹಿಸಿ ಮಾತನಾಡಿದರು. ನಗರ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಹಾಂತೇಶ ಚಟ್ಟೇರ ಅಧ್ಯಕ್ಷತೆ ವಹಿಸಿದ್ದರು. ಶರಣಬಸವರಾಜ ಬಿಸರಳ್ಳಿ, ರಾಜ್ಯ ಸಂಘದ ಉಪಾಧ್ಯಕ್ಷ ಅಂದಪ್ಪ ಜವಳಿ, ದೇವರಮುನಿ ಶಿವಕುಮಾರ, ಪ್ರಧಾನ ಕಾರ್ಯದರ್ಶಿ ಶರಣು ಸಬರದ, ನಿಕಟಪೂರ್ವ ಕೋಶಾಧ್ಯಕ್ಷ ಶಿವಯೋಗಿ ಹತ್ತಿ, ಕೋಶಾಧ್ಯಕ್ಷ ವೀರೇಶ ಸಂಗಳದ, ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಪ್ರೇಮಕ್ಕ ಅಂಗಡಿ, ಜಿಲ್ಲಾ ಘಟಕದ ಅಧ್ಯಕ್ಷ ತಾತಾಸಾಹೇಬ ಬಾಂಗಿ, ಗೌರವಾಧ್ಯಕ್ಷ ಡಾ. ಅರುಣಾ ಅಕ್ಕಿ, ಬಸವರಾಜ ಬಳ್ಳೊಳ್ಳಿ, ಬಸವರಾಜ ಮಸೂತಿ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಶಿವಾನಂದ ಉದಪುಡಿ, ಸಂಗಣ್ಣ ಚಿನಿವಾಲರ ಇತರರಿದ್ದರು.

ನಗರದ ವಿಶ್ವಸ್ಥ ಮಂಡಳಿ ಸದಸ್ಯರಾದ ಸಿದ್ದಪ್ಪ ಅಂಗಡಿ, ಮಹಾಂತಪ್ಪ ಪಟ್ಟಣಶೆಟ್ಟಿ, ಡಾ. ಮಹಾಂತೇಶ ಅಕ್ಕಿ, ಮಲ್ಲಿಕಾರ್ಜುನ ಶೆಟ್ಟರ, ಶಿವರುದ್ರಪ್ಪ ಗೊಂಗಡಶೆಟ್ಟಿ, ಮಹಾಬಳೇಶ ಮರಟದ, ಬಸವರಾಜ ಹುಂಡೇಕಾರ ಸೇರಿದಂತೆ 25ಕ್ಕೂ ಹೆಚ್ಚು ದಂಪತಿಯನ್ನು, ಹಿಂದಿನ ವರ್ಷ ರಾಜ್ಯಮಟ್ಟದ ಬಣಜಿಗ ಸಮಾವೇಶ ಯಶಸ್ವಿಗೊಳಿಸಲು ಶ್ರಮಿಸಿದ ಮಹನೀಯರನ್ನು ಸನ್ಮಾನಿಸಲಾಯಿತು.

ಎಸ್.ಜಿ. ಲೋಕಾಪುರ ಸ್ವಾಗತಿಸಿದರು. ಗವಿಸಿದ್ದಪ್ಪ ಕೊಪ್ಪಳ ಪ್ರಾಸ್ತಾವಿಕ ಮಾತನಾಡಿದರು. ಚಂದ್ರು ಚಟ್ಟೇರ, ಪಿ.ಎಸ್. ಕಟಗೇರಿ ನಿರೂಪಿಸಿದರು. ವಿ.ಬಿ. ಜೀರಗಿ ವಂದಿಸಿದರು.

ಸಂವಿಧಾನದ ಆಶಯಂತೆ ನಮ್ಮ ಸಂಘಟನೆ ಕಾರ್ಯನಿರ್ವಹಿಸುವ ಮೂಲಕ ನಮ್ಮ ಹಕ್ಕು ಪಡೆಯುತ್ತಿದೆ. ಸಮಾಜದ ಕಾಲು ಎಳೆಯುವ ಕೆಲಸ ಮಾಡಬಾರದು. ಸಂಘಟನೆ ಮೂಲಕ ನಾವೂ ಏನಾದರೂ ಸಾಸಬಹುದು. ಈ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಸಮಾಜದ ಏಳಿಗೆಗೆ ಶ್ರಮಿಸೋಣ.
– ಡಾ. ಶಿವಬಸಪ್ಪ ಹೆಸರೂರ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...