25.7 C
Bangalore
Sunday, December 15, 2019

ಗದ್ದಿಗೌಡರ ಅಭಿವೃದ್ಧಿ ವಿಶ್ಲೇಷಣೆಯಾಗಲಿ

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ಇಳಕಲ್ಲ: ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಅವರು ತಮ್ಮ ಅವಧಿಯಲ್ಲಿ ಜಿಲ್ಲೆಗೆ ಏನು ಕೊಡುಗೆ ನೀಡಿದ್ದಾರೆ ಎಂಬುದರ ಬಗ್ಗೆ ವಿಶ್ಲೇಷಣೆಯಾಗಬೇಕು ಎಂದು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ವೀಣಾ ಕಾಶಪ್ಪನವರ ಹೇಳಿದರು.

ನಗರದ ಜೆಡಿಎಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪ್ರಚಾರದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪಿ.ಸಿ. ಗದ್ದಿಗೌಡರ ಅವರು ಕ್ಷೇತ್ರಕ್ಕೆ ಯಾವುದೇ ಜನಪ್ರಿಯ ಯೋಜನೆ ಜಾರಿಗೆ ತಂದಿಲ್ಲ. ಕೇಂದ್ರದಿಂದ ಬಂದಿದ್ದ ಅನುದಾನವನ್ನು ಸಮಪರ್ಕವಾಗಿ ಬಳಕೆ ಮಾಡಿಕೊಳ್ಳುವಲ್ಲಿ ಸಂಪೂರ್ಣವಾಗಿ ವಿಲರಾಗಿದ್ದಾರೆ ಎಂದು ಆರೋಪಿಸಿದರು.

ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಪಕ್ಷಗಳ ಮೈತ್ರಿ ಸರ್ಕಾರ ಇರುವುದರಿಂದ ಮೈತ್ರಿ ಧರ್ಮ ಪಾಲಿಸಿಕೊಂಡು ಎರಡೂ ಪಕ್ಷಗಳ ಕಾರ್ಯಕರ್ತರು ಒಗ್ಗಟ್ಟಿನಿಂದ ಮೈತ್ರಿ ಅಭ್ಯರ್ಥಿ ವೀಣಾ ಕಾಶಪ್ಪನವರ ಗೆಲುವಿಗಾಗಿ ಶ್ರಮಿಸಬೇಕು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಸ್.ಆರ್. ನವಲಿಹಿರೇಮಠ, ವೀಣಾ ಕಾಶಪ್ಪನವರ ಅವರು ಜಿಪಂನಲ್ಲಿ ಉತ್ತಮ ಆಡಳಿತ ನೀಡಿ ಹೆಸರು ಮಾಡಿದ್ದಾರೆ. ಅವರು ಸಂಸದರಾದರೆ ಕ್ಷೇತ್ರದ ಅಭಿವೃದ್ಧಿಯಾಗಲಿದೆ. ಜೆಡಿಎಸ್ ಕಾರ್ಯಕರ್ತರು ಎಲ್ಲಾವನ್ನು ಮರೆತು ವೀಣಾ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು.

ಜೆಡಿಎಸ್ ಮುಖಂಡರಾದ ಹನುಮಂತ ಮಾವಿನಮರದ, ಜಬ್ಬಾರ ಕಲಬುರ್ಗಿ, ಘನಶ್ಯಾಂ ಭಾಂಡಗೆ, ಶಂಕರ ನಾಯಕ, ವಿಜಯಮಹಾಂತೇಶ ಗದ್ದನಕೇರಿ, ವಿಜಯಕುಮಾರ ಪಾಟೀಲ ಮಾತನಾಡಿದರು.

ಮಹಾಂತೇಶ ಅಂಗಡಿ, ಎಂ.ಎಸ್. ಪಾಟೀಲ, ಶರಣು ಹುರಕಡ್ಲಿ, ಎಂ.ಎಸ್. ಹೀರಾಳ, ರಾಮನಗೌಡ ಮೇಟಿ, ಸಂಗಪ್ಪ ಕಂದಗಲ್ಲ, ಮಲ್ಲಿಕಾರ್ಜುನ ಗಾಣಿಗೇರ, ವೆಂಕಟೇಶ ದೇಶಪಾಂಡೆ, ಜಿಪಂ ಸದಸ್ಯೆ ಚಂದವ್ವ ಓಲೇಕಾರ, ನಗರಸಭೆ ಸದಸ್ಯೆಯರಾದ ವೀಣಾ ಅರಳಿಕಟ್ಟಿ, ಲಕ್ಷ್ಮಿಬಾಯಿ ಹಾದಿಮನಿ ಹುನಗುಂದ, ಬಾದಾಮಿ, ಬಾಗಲಕೋಟೆ, ಬೀಳಗಿ ತಾಲೂಕುಗಳ ಜೆಡಿಎಸ್ ಪಕ್ಷದ ಮುಖಂಡರು ಇದ್ದರು. ವೀಣಾ ಕಾಶಪ್ಪನವರ ಅವರನ್ನು ಜೆಡಿಎಸ್ ಘಟಕದ ವತಿಯಿಂದ ಸನ್ಮಾನಿಸಲಾಯಿತು.

ಕ್ಷಮೆಯಾಚಿಸಿದ ಕಾಶಪ್ಪನವರ
ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ವಿಧಾನಸಭೆ ಚುನಾವಣೆ ಪ್ರಚಾರದ ಸಮಯದಲ್ಲಿ ಪಕ್ಷದ ಹಿತದೃಷ್ಟಿಯಿಂದ ಆರೋಪ ಮಾಡುವ ವೇಳೆ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಸಭೆಯಲ್ಲಿ ಕೈ ಮುಗಿದರು. ಹುನಗುಂದ ಕ್ಷೇತ್ರಕ್ಕೆ ಕಾಶಪ್ಪನವರನ್ನಾಗಲಿ, ನನ್ನನಾಗಲಿ ಆಯ್ಕೆ ಮಾಡಿದ್ದರೆ ಇಂದು ಮಂತ್ರಿಯಾಗಿರಬಹುದಿತ್ತು ಎಂದು ಎಸ್.ಆರ್. ನವಲಿಹಿರೇಮಠ ಹೇಳಿದರು.



Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...