16 C
Bangalore
Thursday, December 12, 2019

ಕಾಮಗಾರಿ ನೆಪಕ್ಕೆ ಮರಗಳ ಮಾರಣಹೋಮ

Latest News

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಇಳಕಲ್ಲ: ನಗರಸಭೆ ವತಿಯಿಂದ ಖಾಸಗಿ ಕಾಲೇಜಿಗೆ 247 ಕುಡಿವ ನೀರಿನ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಕೈಗೆತ್ತಿಕೊಂಡಿರುವ ಪೈಪ್‌ಲೈನ್ ಕಾಮಗಾರಿಯಿಂದಾಗಿ 70ಕ್ಕೂ ಅಧಿಕ ಗಿಡಗಳ ಮಾರಣಹೋಮ ನಡೆಯುತ್ತಿದೆ ಎಂದು ಸೋಸಿಯೋಯುಥ್ ಅಸೋಸಿಯೇಷನ್ ಅಧ್ಯಕ್ಷ ಆನಂದ ಪಾಟೀಲ ದೂರಿದ್ದಾರೆ.

247 ಕುಡಿಯುವ ನೀರಿನ ಯೋಜನೆಯಡಿ ನಗರ ಹೊರವಲಯದ ಸ್ಥಳಗಳಿಗೆ ಪೈಪ್‌ಲೈನ್ ಜೋಡಣೆ ಸಲುವಾಗಿ ಜೆಸಿಬಿ ಯಂತ್ರದಿಂದ 70ಕ್ಕೂ ಹೆಚ್ಚು ಗಿಡಗಳನ್ನು ನೆಲಕ್ಕುರುಳಿಸಿ ಕೈಗೊಂಡಿರುವ ಕಾಮಗಾರಿ ಸ್ಥಳಕ್ಕೆ ಅಸೋಸಿಯೇಶನ್ ಯುವಕರು ಹಾಗೂ ಪರಿಸರ ಪ್ರೇಮಿಗಳೊಂದಿಗೆ ಭೇಟಿ ನೀಡಿ ಆಕ್ರೋಶ ಹೊರಹಾಕಿದರು.
ಪಟ್ಟಣದಿಂದ ಹುನಗುಂದಕ್ಕೆ ಹೋಗುವ ಹೆದ್ದಾರಿಯ ಸರ್ವಿಸ್ ರಸ್ತೆ ಬದಿಯಲ್ಲಿ ಒಂದು ವರ್ಷದ ಹಿಂದೆ ಅಸೋಸಿಯೇಷನ್‌ನ ಯುವಕರು ನೂರಾರು ಗಿಡಗಳನ್ನು ನೆಟ್ಟು ಪೋಷಿಸಿದ್ದರು. ಸರ್ಕಾರ ಮನೆಗೊಂದು ಸಸಿ ನೆಡಬೇಕೆನ್ನುವ ಉದ್ದೇಶ ಹೊಂದಿದ್ದರೆ ಕೆಲವರು ಗಿಡಮರಗಳ ನಾಶಕ್ಕೆ ಮುಂದಾಗುತ್ತಿದ್ದಾರೆ ಎಂದು ಆರೋಪಿಸಿದರು.

ಹುನಗುಂದ ಆರ್‌ಎ್ಒ ಬಲವಂತನವರ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಈ ವೇಳೆ ಗುತ್ತಿಗೆದಾರರು ತಮ್ಮ ತಪ್ಪನ್ನು ಒಪ್ಪಿಕೊಂಡು 250 ಸಸಿ ನೆಟ್ಟು ಒಂದು ವರ್ಷದವರೆಗೆ ಪೋಷಣೆ ಮಾಡುವುದಾಗಿ ಒಪ್ಪಿಕೊಂಡರು.

ನಗರ ಸುತ್ತ ಸಾವಿರಾರು ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದೇವೆ. ಅಭಿವೃದ್ಧಿ ಹೆಸರಲ್ಲಿ ಈ ರೀತಿ ಅವೈಜ್ಞಾನಿಕವಾಗಿ ಮರ ಕಡಿದಿರುವುದು ನೋವುಂಟು ಮಾಡಿದೆ. ವರ್ಷಾನುಗಟ್ಟಲೆ ಶ್ರಮ ಹಾಕಿ ಬೆಳೆಸಿದ ಗಿಡಗಳನ್ನು ಒಂದೇ ಕ್ಷಣದಲ್ಲಿ ನಾಶ ಮಾಡಿದ್ದಕ್ಕೆ ಬೇಸರ ತಂದಿದೆ.
– ಆನಂದ ಪಾಟೀಲ ಸೋಸಿಯೋಯುಥ್ ಅಸೋಸಿಯೇಷನ್ ಅಧ್ಯಕ್ಷ

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...