‘ತೇಲುವ ಚಿನ್ನ ಖ್ಯಾತಿಯ’ ಅಂಬೇಗ್ರೀಸ್ ಮಾರಾಟಕ್ಕೆ ಯತ್ನಿಸಿದ ನಾಲ್ವರ ಬಂಧನ, ಅದರ ಬೆಲೆ ಎಷ್ಟು ಗೊತ್ತಾ..?

ambegris pic
Published on

ಬೆಂಗಳೂರು: ತೇಲುವ ಚಿನ್ನ ಖ್ಯಾತಿಯ ನಿಷೇಧಿತ ಅಂಬೇಗ್ರೀಸ್ (ತಿಮಿಂಗಿಲ ವಾಂತಿ) ಮಾರಾಟ ಮಾಡಲು ಯತ್ನಿಸಿದ ನಾಲ್ವರು ಆರೋಪಿಗಳನ್ನು ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 11 ಕೋಟಿ ರೂ. ಮೌಲ್ಯದ 11 ಕೆಜಿ ಅಂಬೇಗ್ರೀಸ್ ವಶಪಡಿಸಿಕೊಳ್ಳಲಾಗಿದೆ. ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಐಟಿ ರಸ್ತೆಯ ಗಂಗಾನಗರದಲ್ಲಿ ನಿಷೇಧಿತ ವಸ್ತುವನ್ನು ಆರೋಪಿಗಳು ಮಾರಾಟಕ್ಕೆ ಯತ್ನಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಚಿಕ್ಕಜಾಲ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಏನಿದು ಅಂಬೇಗ್ರೀಸ್..?

ಸ್ಪರ್ಮ್ ವೇಲ್ ಪ್ರಭೇದದ ತಿಮಿಂಗಿಲ ಹೊರಹಾಕುವ ವಾಂತಿಯನ್ನು ಅಂಬೇಗ್ರೀಸ್ ಎಂದು ಕರೆಯಾಗುತ್ತದೆ. ಘನ ಮೇಣದ ರೀತಿಯಲ್ಲಿದ್ದು, ವಾಸನೆಯಿಂದ ಕೂಡಿರಲಿದೆ‌‌. ಸುಗಂಧ ದ್ರವ್ಯ ಹಾಗೂ ಔಷಧಿ ತಯಾರಿಕೆಯಲ್ಲಿ ಇದನ್ನು ಬಳಸಲಾಗುತ್ತದೆ. ಅರಬ್, ಚೀನಾ ಹಾಗೂ ಪಾಶ್ಚಿಮಾತ್ಯ ದೇಶಗಳಲ್ಲಿ ಅಪಾರ ಬೇಡಿಕೆಯಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಕೆ.ಜಿ.ಗೆ ಅಂಬೇಗ್ರೀಸ್ ಸುಮಾರು ಒಂದು ಕೋಟಿ ರೂಪಾಯಿ ಬೆಲೆಯಿದೆ. ಪರ್ಫ್ಯೂಮ್​​​​ಗಾಗಿ ಬಳಕೆಯಾಗುವ ಈ ಅಂಬೇಗ್ರೀಸ್ ಭಾರತದಲ್ಲಿ ಮಾರಾಟ ಮಾಡುವುದು ಕಾನೂನು ಪ್ರಕಾರ ಅಪರಾಧ. ಇದನ್ನು ಸಂಶೋಧನೆಗಾಗಿ ಮಾತ್ರ ಬಳಸಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net