

ವಿಜಯಪುರ: ಗೃಹ ಬಳಕೆಯ ಸಿಲಿಂಡರ್‌ಗಳಿಂದ ವಾಣಿಜ್ಯ ಉದ್ದೇಶದ ಸಿಲಿಂಡರ್‌ಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ ಮಾಡುತ್ತಿರುವ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಶನಿವಾರ ವಿಜಯಪುರ ನಗರದ ಬಾಟರ ಓಣಿಯ ಹತ್ತಿರ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳಿಂದ ವಾಣಿಜ್ಯ ಉದ್ದೇಶದ ಸಿಲಿಂಡರ್‌ಗಳಿಗೆ ರೀಫಿಲ್ ಮಾಡುತ್ತಿರುವ ಸ್ಥಳದ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ದಾಳಿ ಮಾಡಿ 20 ತುಂಬಿದ ಅಡುಗೆ ಅನಿಲ ಸಿಲಿಂಡರ್‌ಗಳನ್ನು, 6 ವಾಣಿಜ್ಯ ಉದ್ದೇಶದ ಖಾಲಿ ಸಿಲಿಂಡರ್‌ಗಳನ್ನು ಹಾಗೂ ರೀಫಿಲ್ ಮಾಡಲು ಬಳಸುತ್ತಿದ್ದ ಮೋಟಾರು ಮತ್ತು ತೂಕದ ಯಂತ್ರವನ್ನು ವಶಪಡಿಸಿಕೊಂಡು ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಆಹಾರ ನಿರೀಕ್ಷಕ ವಿಜಕುಮಾರ ಗುಮಶೆಟ್ಟಿ ನೇತೃತ್ವದ ದಾಳಿಯಲ್ಲಿ ಆದರ್ಶ ನಗರ ಪಿಎಸ್‌ಐ ರೇಣುಕಾ ದಿನ್ನಿ, ಆಹಾರ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು ಎಂದು ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.