More

    ಅಕ್ರಮ ಮನೆ ತೆರವಿಗೆ ನಿರ್ದಾಕ್ಷಿಣ್ಯ ಕ್ರಮ

    ಬೆಳಗಾವಿ: ನಗರದಲ್ಲಿ ಅಕ್ರಮ ಮನೆಗಳನ್ನು ನಿರ್ಮಿಸಿದ್ದರೆ ಅವುಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲಾಗು ವುದು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಘೂಳಪ್ಪ ಹೊಸಮನಿ ಎಚ್ಚರಿಕೆ ನೀಡಿದರು.

    ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಅಕ್ರಮ ಮನೆಗಳ ನಿರ್ಮಾಣ ಮಾಡಿರುವುದನ್ನು ಪತ್ತೆ ಹಚ್ಚಲು ಸರ್ವೇ ಮಾಡಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

    ನಗರದಲ್ಲಿ ಕಟ್ಟಡ ನಿರ್ಮಾಣದ ವೇಳೆ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿದ ಹಲವು ಪ್ರಕರಣಗಳಿವೆ. ಅವುಗಳನ್ನು ಕಾನೂನು ಬದ್ಧಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸ್ಕೀಂ ನಂ. 61ರಡಿ 23 ಎಕರೆ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡು ಡಿ ಮತ್ತು ಸಿ ಗ್ರುಪ್ ನೌಕರರಿಗೆ 3,700 ಮನೆ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಸಭೆಯಲ್ಲಿ ಅಕ್ರಮ ಕಟ್ಟಣ ನಿರ್ಮಾಣ, ಹೊಸ ನಿವೇಶನಗಳ ಅಭಿವೃದ್ಧಿ, ನಗರ ಅಭಿವೃದ್ಧಿ ಯೋಜನೆಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು. ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಪಾಲಿಕೆ ಆಯುಕ್ತ ಜಗದೀಶ ಕೆ.ಎಚ್., ಬುಡಾ ಆಯುಕ್ತ ಪ್ರೀತಂ ನಸಲಾಪುರೆ, ಡಿಸಿಪಿ ಚಂದ್ರಶೇಖರ ನೀಲಗಾರ ಸಭೆಯಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts