More

    ಅಕ್ರಮ ಕಂಡುಬಂದರೆ ತಕ್ಷಣ ಪ್ರಕರಣ ದಾಖಲಿಸಿ

    ಬೆಳಗಾವಿ: ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದಷ್ಟು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವುದು ಸಾಧ್ಯವಾಗಲಿದೆ. ಆದ್ದರಿಂದ ನೀತಿಸಂಹಿತೆ ಪಾಲನೆಗೆ ಕಡ್ಡಾಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ ಹೇಳಿದರು.

    ಭಾನುವಾರ ಗೋಕಾಕ, ಅರಬಾವಿ, ರಾಮದುರ್ಗ, ಸವದತ್ತಿ ಮತ್ತು ಬೈಲಹೊಂಗಲ ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ತಂಡಗಳ ಜತೆ ಪ್ರತ್ಯೇಕ ಸಮಾಲೋಚನಾ ಸಭೆ ನಡೆಸಿ, ಸೂಚನೆ ನೀಡಿದರು. ಇಡೀ ರಾಜ್ಯದಲ್ಲಿಯೇ ಒಂದೇ ಲೋಕಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ವೇಳೆ ಎಲ್ಲರ ಗಮನ ಇಲ್ಲಿಯೇ ಕೇಂದ್ರೀಕೃತ ಆಗಿರುವುದರಿಂದ ಚುನಾವಣೆಗೆ ನಿಯೋಜಿತ ಅಧಿಕಾರಿಗಳು ಮತ್ತು ಸಿಬ್ಬಂದಿ ಸದಾ ಎಚ್ಚರಿಕೆಯಿಂದ ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು. ನೀತಿ ಸಂಹಿತೆ ಉಲ್ಲಂಘ ಮತ್ತು ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ದೂರುಗಳು ಬಂದಾಗ ಸಂಬಂಧಿಸಿದ ತಂಡಗಳು ತಕ್ಷಣ ಸ್ಥಳಕ್ಕೆ ತೆರಳಿ ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಪ್ರಕರಣ ದಾಖಲಿಸಬೇಕು. ಚುನಾವಣಾ ಪ್ರಚಾರಸಭೆಗಳು ಹಾಗೂ ರಾಜಕೀಯ ಪಕ್ಷಗಳ ಸಭೆ-ಸಮಾರಂಭಗಳು ನಡೆಯುತ್ತಿರುವ ಸ್ಥಳಗಳಲ್ಲಿ ನೀತಿಸಂಹಿತೆ ಉಲ್ಲಂಘನೆ ಹಾಗೂ ಖರ್ಚು-ವೆಚ್ಚಗಳ ಬಗ್ಗೆ ನಿಗಾ ವಹಿಸುವುದರ ಜತೆಗೆ ವಿಡಿಯೋ ಚಿತ್ರೀಕರಣ ಮಾಡುವಂತೆ ನಿರ್ದೇಶನ ನೀಡಿದರು. ಸಮಾಲೋಚನಾ ಸಭೆಯಲ್ಲಿ ಫ್ಲೈಯಿಂಗ್ ಸರ್ವೆಲನ್ಸ್, ಎಸ್‌ಎಸ್ ಟಿ, ವಿಎಸ್‌ಟಿ, ವಿವಿಟಿ ಸೇರಿ ಎಲ್ಲ ತಂಡಗಳ ಮುಖ್ಯಸ್ಥರು, ಸೆಕ್ಟರ್ ಅಧಿಕಾರಿಗಳು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts