Illegal Maiming 63.53 ಲಕ್ಷ ದಂಡ ಆಕರಣೆ

Illegal Maiming

 

ಕಾರವಾರ: ಜಿಲ್ಲೆಯಲ್ಲಿ Illegal Maiming ಸಂಬಂಧ 205 ಪ್ರಕರಣಗಳನ್ನು ದಾಖಲಿಸಿ,  ರೂ.63.53 ಲಕ್ಷ ದಂಡ ವಿಧಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಆಶಾ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ  ಕಲ್ಲುಪುಡಿ ಮಾಡುವ ಘಟಕಗಳ ಲೈಸೆನ್ಸ್
ನೀಡುವಿಕೆ ಹಾಗೂ ನಿಯಂತ್ರಣ ಪ್ರಾಧಿಕಾರ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಅವರಿಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಪ್ರಸ್ತುತ ಸಾಲಿನಲ್ಲಿ ಉಪ ಖನಿಜ ಗಣಿಗಾರಿಕೆ(Illegal Maiming ) ಸಾಗಾಣಿಕೆ,ದಾಸ್ತಾನು ಸಂಬಂಧಿಸಿದಂತೆ  ಒಂದು ವರ್ಷದಲ್ಲಿ ಅಷ್ಟು ಪ್ರಕರಣಗಳನ್ನು ದಾಖಲಿಸಲಾಗಿದೆ. ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವ 9 ಪ್ರಕರಣಗಳನ್ನು ಪತ್ತೆ ಹಚ್ಚಿ ಅಂದಾಜು 529 ಮೆ. ಟನ್ ಮರಳನ್ನು ಜಫ್ತುಪಡಿಸಿ ಸರ್ಕಾರಿ ಕಾಮಗಾರಿಗಳಿಗೆ ಹಸ್ತಾಂತರಿಸಲಾಗಿದೆ. ಜಿಲ್ಲೆಯಾದ್ಯಂತ ನಡೆಯುವ ಅನಧಿಕೃತ ಉಪ ಖನಿಜ ಗಣಿಗಾರಿಕೆ, ಸಾಗಾಣಿಕೆ, ದಾಸ್ತಾನು ಚಟುವಟಿಕೆ ತಡೆಗಟ್ಟಲು ಚಾಲಿತ ದಳಗಳನ್ನು ರಚಿಸಲಾಗಿದೆ ಎಂದು ವಿವರಿಸಿದರು.

Illegal Maiming ತಡೆಯಿರಿ

ಜಿಲ್ಲೆಯಲ್ಲಿ ಕಲ್ಲು ಕ್ರಷರ್‌ಗಳಿಗೆ ಅನುಮತಿ ನೀಡುವ ಮುನ್ನ ಕ್ರಷರ್ ಅಧಿನಿಯಮದಲ್ಲಿನ ಸರ‍್ಷಕಿತ ವಲಯ ಕುರಿತಂತೆ ರೂಪಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾಕಲ್ಲು ಕ್ರಶರ್‌ಗಳು ರಾಷ್ಟ್ರೀ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಯಿಂದ ನಿಗಧಿಪಡಿಸಿದ ಅಂತರದಲ್ಲಿ ಇರಬೇಕು.  ಜಿಲ್ಲಾ ರಸ್ತೆಯಿಂದ ಮತ್ತು ಇತರೆ ರಸ್ತೆಯಿಂದ, ಕಂದಾಯ ಗ್ರಾಮ, ದೇವಸ್ಥಾನ, ಶಾಲೆಯಿಂದ ನಿಗಧಿತ ದೂರದಲ್ಲಿರುವುದರ ಬಗ್ಗೆ ಸ್ಥಳ ಪರಿಶೀಲಿಸಿ, ಲಿಖಿತ ಆಭಿಪ್ರಾಯ ದಾಖಲಿಸಬೇಕು. ಕ್ರಷರ್‌ಗಳಿಂದ ಸಾರ್ವಜನಿಕರು ಮತ್ತು ಪರಿಸರಕ್ಕೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಅನುಮತಿಗಳನ್ನು ನೀಡುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಪ್ರಸ್ತುತ ಈಗಾಗಲೇ ಕ್ರಶರ್‌ಗಳಿಗೆ ಅನುಮತಿ ಪಡೆದು ಲೈಸೆನ್ಸ್ ನವೀಕರಣ ಕೋರುವ ಅರ್ಜಿಗಳ ಕುರಿತಂತೆ ಸಂಬಂದಪಟ್ಟ ದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಕಡ್ಡಾಯವಾಗಿ ಸ್ಥಳ ಪರಿಶೀಲನೆ ನಡೆಸುವಂತೆ ಸೂಚಿಸಿದರು.
ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್, ಉಪ ವಿಭಾಗಾಧಿಕಾರಿ ಕನಿಷ್ಕ, ಡಿವೈಎಸ್‌ಪಿ ಗಿರೀಶ್ ಮತ್ತಿತರರು ಭಾಗವಹಿಸಿದ್ದರು.

 

ಇದನ್ನೂ ಓದಿ: https://www.vijayavani.net/mca-celebrates-50-years-of-wankhede-stadium-by-creating-a-guinness-world-records-title

https://youtu.be/w16KOsErY14

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…