More

    ಕೆಐಎಡಿಬಿ ಅಧಿಸೂಚಿತ ಜಾಗದಲ್ಲಿ ಅಕ್ರಮ ಗಿಡಮರ: ತನಿಖೆಗೆ ಆದೇಶ

    ಬೆಂಗಳೂರು: ನೆಲಮಂಗಲ ತಾಲ್ಲೂಕಿನ ಹನುಮಂತಪುರ, ಬಿದ್ಲೂರು, ಕೋಡಿಪಾಳ್ಯ ವ್ಯಾಪ್ತಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿಯು (ಕೆಐಎಡಿಬಿ) ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಪ್ರಾಥಮಿಕ ಅಧಿಸೂಚನೆ ಹೊರಡಿಸಿರುವ ಜಮೀನಿನಲ್ಲಿ ಕೆಲವರು ಹೆಚ್ಚಿನ ಪರಿಹಾರ ಪಡೆಯಲೆಂದೇ ಗಿಡಮರಗಳನ್ನು ನೆಟ್ಟಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ತನಿಖೆ ನಡೆಸಿ ಮೂರು ದಿನಗಳಲ್ಲಿ ವರದಿ ನೀಡುವಂತೆ ಸಂಸ್ಥೆಯ ಸಿಇಒ ಡಾ.ಎಂ.ಮಹೇಶ ಅವರು ವಿಶೇಷ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

    ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಿಯಮಗಳ ಪ್ರಕಾರ ಪ್ರಾಥಮಿಕ ಅಧಿಸೂಚನೆ ಹೊರಡಿಸಿದಾಗ ಜಮೀನುಗಳಲ್ಲಿ ಇರುವ ಗಿಡಮರಗಳು ಮತ್ತು ಕಟ್ಟಡಗಳಿಗೆ ಮಾತ್ರ ಪರಿಹಾರ ಕೊಡಲಾಗುವುದು. ಆದರೆ ಕೆಲವೆಡೆಗಳಲ್ಲಿ ವಿಪರೀತ ಪರಿಹಾರ ದಕ್ಕಿಸಿಕೊಳ್ಳಲೆಂದೇ ಕೆಲವರು ಅಧಿಸೂಚಿತ ಜಮೀನುಗಳಲ್ಲಿ ಬೇರೆಡೆ ಬೆಳೆದು ನಿಂತಿರುವ ಬಲಿತ ಗಿಡಮರಗಳನ್ನು ತಂದು ನೆಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈ ಕಾರಣಕ್ಕೆ ಈ ಆದೇಶ ಮಾಡಿದ್ದು, ತನಿಖಾ ತಂಡದಲ್ಲಿ ಕೆಐಎಡಿಬಿ ಮುಖ್ಯ ಎಂಜಿನಿಯರ್ ಕೂಡ ಇರಲಿದ್ದಾರೆ ಎಂದು ತಿಳಿಸಿದ್ದಾರೆ.

    ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ ಅಥವಾ ಇಸ್ರೋದ ಸ್ಯಾಟಲೈಟ್ ಮ್ಯಾಪಿಂಗ್ ಆಧರಿಸಿಯೇ ಅಧಿಸೂಚಿತ ಜಮೀನುಗಳಿಗೆ ಪರಿಹಾರ ವಿತರಿಸುವುದನ್ನು ಕಡ್ಡಾಯಗೊಳಿಸಲಾಗುವುದು. ಅದಿಸೂಚನೆ ಹೊರಡಿಸಿದ ನಂತರ ಹೆಚ್ವಿನ ಪರಿಹಾರಕ್ಕಾಗಿ ಗಿಡ/ಮರ ತಂದು ನೆಡುವುದರ ಮೂಲಕ ಸಂಸ್ಥೆಗೆ ನಷ್ಟ ಉಂಟು ಮಾಡಿದರೆ ಅದಕ್ಕೆ ಸಂಬಂಧಪಟ್ಟ ವಿಶೇಷ ಭೂಸ್ವಾಧೀನಾಧಿಕಾರಿಯನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಹಾಗೆಯೇ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಮಹೇಶ ಎಚ್ಚರಿಸಿದ್ದಾರೆ.

    IPL 2024: ಯಾವ ತಂಡಕ್ಕೆ ಕಪ್​ ಗೆಲ್ಲುವ ಅವಕಾಶ ಜಾಸ್ತಿ ಇದೆ? ಆರ್​ಸಿಬಿ ಫ್ಯಾನ್ಸ್​ಗೆ ಗುಡ್​ ನ್ಯೂಸ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts