More

    ಕೋಟೇಶ್ವರ ಸಮೀಪದ ಗೋದಾಮಿನಲ್ಲಿತ್ತು 50 ಟನ್‌ಗೂ ಅಧಿಕ ಪಡಿತರ ಅಕ್ಕಿ!

    ಕುಂದಾಪುರ: ಬಡವರಿಗೆ ನೀಡುವ ಪಡಿತರ ಅಕ್ಕಿಯನ್ನು ಖರೀದಿಸಿ ಕೋಟೇಶ್ವರದ ಕಟ್ಕೆರೆ ಸಮೀಪದ ಮೇಪು ಎಂಬಲ್ಲಿ ಗೋದಾಮಿಗೆ ತಂದು ಬ್ಯಾಗುಗಳನ್ನಾಗಿಸಿ ಕೇರಳ ಮೊದಲಾದೆಡೆ ಸಾಗಿಸುವ ಬೃಹತ್ ಜಾಲವನ್ನು ಉಡುಪಿ ಡಿಸಿಐಬಿ ಪೊಲೀಸರು ಗುರುವಾರ ಸಾಯಂಕಾಲ ಕೋಟೇಶ್ವರದ ಕಟ್ಕೆರೆ ಸಮೀಪದ ಮೇಪು ಎಂಬಲ್ಲಿ ಪತ್ತೆ ಮಾಡಿದ್ದಾರೆ.

    ಕಾರ್ಯಾಚರಣೆಯಲ್ಲಿ 9 ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಗೋದಾಮಿನಲ್ಲಿದ್ದ 50 ಟನ್‌ಗೂ ಅಧಿಕ ಪಡಿತರ ಅಕ್ಕಿ, ಸಾಗಾಟಕ್ಕೆ ಬಳಸುವ ಎರಡು ಲಾರಿ, ಮೂರು ಕಾರುಗಳು, ಬೈಕುಗಳು ಹಾಗೂ ಎರಡು ಲಕ್ಷಕ್ಕೂ ಅಧಿಕ ನಗದು, ಮೊಬೈಲ್ ಫೋನುಗಳು, ಇಲೆಕ್ಟ್ರಿಕಲ್ ತೂಕಮಾಪಕ ವಶಪಡಿಸಿಕೊಳ್ಳಲಾಗಿದೆ. ಇವೆಲ್ಲದರ ಒಟ್ಟು ಮೌಲ್ಯ ಒಂದು ಕೋಟಿಗೂ ಅಧಿಕ ಎಂದು ಅಂದಾಜಿಸಲಾಗಿದೆ.

    ವ್ಯವಸ್ಥಿತ ಜಾಲ ಕಾರ್ಯಾಚರಿಸುತ್ತಿರುವ ಬಗ್ಗೆ ಉಡುಪಿ ಡಿಸಿಐಬಿ ನಿರೀಕ್ಷಕ ಮಂಜಪ್ಪ ಡಿ.ಆರ್. ಅವರಿಗೆ ಖಚಿತ ಮಾಹಿತಿ ಲಭಿಸಿತು. ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖಾ ಅಧಿಕಾರಿಗಳ ಜತೆ ದಾಳಿ ಮಾಡಿದಾಗ ದಂಧೆ ಬೆಳಕಿಗೆ ಬಂದಿದೆ. ಮನೆಯಂತಿರುವ ಎರಡು ಪ್ರತ್ಯೇಕ ಗೋದಾಮಿನಲ್ಲಿ ಅಕ್ಕಿ ಪತ್ತೆಯಾಗಿದೆ. ಆರೋಪಿಗಳು ಬಡವರಿಗೆ ಹಣದ ಆಮಿಷ ತೋರಿಸಿ ಅವರಿಂದ ಪಡಿತರ ಅಕ್ಕಿಯನ್ನು ಖರೀದಿಸಿ ಗೋದಾಮಿಗೆ ತಂದು ಚೀಲಗಳನ್ನು ಮಾಡಿ ಹೆಚ್ಚಿನ ದರಕ್ಕೆ ಬೇರೆಡೆಗೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

    ಉಡುಪಿ ಡಿಸಿಐಬಿ ನಿರೀಕ್ಷಕ ಮಂಜಪ್ಪ ಡಿ.ಆರ್, ಕುಂದಾಪುರ ಸಿಪಿಐ ಗೋಪಿಕೃಷ್ಣ, ಪಿಎಸ್‌ಐ ಸದಾಶಿವ ಗವರೋಜಿ, ಆಹಾರ ಇಲಾಖೆಯ ಪ್ರಭಾರ ಉಪತಹಸೀಲ್ದಾರ್ ಪ್ರಕಾಶ್ ದೇವಾಡಿಗ, ಆಹಾರ ನಿರೀಕ್ಷಕ ಸುರೇಶ್, ಡಿಸಿಐಬಿ ಎಎಸ್‌ಐ ರವಿಚಂದ್ರ ಮೊದಲಾದವರು ಕಾರ‌್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts