20.4 C
Bangalore
Monday, December 9, 2019

ಕೆಂಪುಕಲ್ಲು ಅಕ್ರಮ ಗಣಿಗಾರಿಕೆಯಿಂದ ಆಲೂರು ಹಾಳು!

Latest News

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

– ಶ್ರೀಪತಿ ಹೆಗಡೆ ಹಕ್ಲಾಡಿ ಕುಂದಾಪುರ
ಒಂದು ಕಾಲದಲ್ಲಿ ಕರ್ಕಶ ಸದ್ದಿಲ್ಲದೆ ಶಾಂತವಾಗಿರುತ್ತಿದ್ದ ಆಲೂರಲ್ಲಿ ಈಗ ಕಣ್ಣು ಹಾಯಿಸಿದಷ್ಟು ಉದ್ದಕ್ಕೂ ಕಾಣುವುದು ಕ್ವಾರಿ ಹೊಂಡಗಳೇ! ಅಡ್ಡಾದಿಡ್ಡಿ ಬಿದ್ದ ವೇಸ್ಟ್ ಕಲ್ಲುಗಳು, ನೀರು ನಿಂತ ಹೊಂಡಗಳು ಊರ ಸೌಂದರ್ಯವನ್ನೇ ಕೆಡಿಸಿವೆ.
ಆಲೂರು ಹಿಂದೆ ಮಡಕೆಗಳ ತವರು. ಆಲೂರಿನ ಕೆಂಪುಕಲ್ಲಿಗೆ ಬೇಡಿಕೆ ಬಂದ ನಂತರ ಹಂತಹಂತವಾಗಿ ಬದಲಾಗತೊಡಗಿತು. ಈಗ ಇಲ್ಲಿ ಅಕ್ರಮ ಗಣಿಗಾರಿಕೆಯದೇ ಸದ್ದು.
ನೂರಾರು ಹೆಕ್ಟೇರ್ ಜಾಗದಲ್ಲಿ ದಿನಕ್ಕೆ ಸಾವಿರಾರು ಕಲ್ಲು ಭೂಮಿಯಿಂದ ಮೇಲಕ್ಕೆ ಬರುತ್ತದೆ. ಹತ್ತಾರು ಲೋಡ್ ಕಲ್ಲುಗಳ ಸಾಗಾಟವಿದೆ. ಯಾವುದಕ್ಕೂ ಪರವಾನಗಿ ಇಲ್ಲ. ರಕ್ಷಿತಾರಣ್ಯದಲ್ಲಿ ನಡೆಯುವ ಗಣಿಗಾರಿಕೆಗೆ ಅರಣ್ಯ ಇಲಾಖೆ ಅಧಿಕಾರಿಗಳೇ ಬೆಂಬಲಿಸುತ್ತಾರೆ ಎಂಬುದು ಸ್ಥಳೀಯರ ಆರೋಪ. ಆಲೂರು ರಸ್ತೆಯಲ್ಲಿ ಒಂದು ಸುತ್ತು ಹಾಕಿದರೆ ಗಣಿ ಕಾರುಬಾರಿನ ನಿಜದರ್ಶನವಾಗುತ್ತ ದೆ. ರಸ್ತೆ ಪಕ್ಕ, ಮನೆಗಳ ಸಮುಚ್ಚಯ ಸಮೀಪ, ಶಾಲಾ ವಠಾರ ಹೀಗೆ ಎಲ್ಲೆಂದರಲ್ಲಿ ಸಾಗುತ್ತದೆ ಕಲ್ಲು ಕ್ವಾರಿ ಲಾರಿಗಳು. ಆಲೂರು ಪರಿಸರದ ಗಣಿಗಾರಿಕೆ ಹೊಟ್ಟೆಪಾಡಿಗಾಗಿ ಎನ್ನುವವರೂ ಇದ್ದಾರೆ.

ಜವಾಬ್ದಾರಿ ಮರೆತ ಅರಣ್ಯ ಇಲಾಖೆ!:  ಅತಿ ಹೆಚ್ಚು ಅಕ್ರಮ ಕೆಂಪುಕಲ್ಲು ಗಣಿ ನಡೆಯುತ್ತಿರುವುದು ಅರಣ್ಯಕ್ಕೆ ಸಂಬಂಧಪಟ್ಟ ಜಾಗದಲ್ಲಿ ಎಂಬುದು ಗಮನಾರ್ಹ. ರಕ್ಷಿತಾರಣ್ಯ, ವನ್ಯಜೀವಿಗಳು ಗಣಿಗಾರಿಕೆ ದೂಳಿಗೆ ನಲುಗುತ್ತಿದ್ದರೂ, ಅರಣ್ಯ ಇಲಾಖೆ ಇದು ತನಗೆ ಸಂಬಂಧಪಟ್ಟಿದ್ದೇ ಅಲ್ಲ ಎನ್ನುವಂತೆ ಸುಮ್ಮನೆ ಕುಳಿತಿದೆ. ಅರಣ್ಯಭಾಗವನ್ನೇ ಒತ್ತುವರಿ ಮಾಡಿಕೊಂಡು ಬೇಲಿ ಸುತ್ತಿ ಗಣಿ ನಡೆಸುತ್ತಿದ್ದರೂ ಇಲಾಖೆ ಕುರುಡಾಗಿದೆ. ಅರಣ್ಯ ಇಲಾಖೆ ಬೆಂಬಲವಿಲ್ಲದೆ ಇದೆಲ್ಲ ಸಾಧ್ಯವೇ ಎಂಬ ಪ್ರಶ್ನೆ ಸಾರ್ವಜನಿಕರದು. ಇಲಾಖೆ ಅಧಿಕಾರಿಗಳೇ ಉತ್ತರಿಸಬೇಕಷ್ಟೆ.

 

ಆಲೂರಿನಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಗಣಿ ಇಲಾಖೆ ಪರವಾನಗಿ ನೀಡಿಲ್ಲ. ಮೊನ್ನೆ ಮೊನ್ನೆ ಆಲೂರು ಅತಿಕ್ರಮ ಗಣಿ ಮೇಲೆ ದಾಳಿ ನಡೆಸಿ ಕೇಸ್ ದಾಖಲಿಸಲಾಗಿದೆ. ಮತ್ತೆ ಗಣಿಗಾರಿಕೆ ನಡೆಯುತ್ತಿರುವುದು ನಮ್ಮ ಗಮನಕ್ಕೆ ಬಂದಿಲ್ಲ. ಅಕ್ರಮ ಕೆಂಪುಕಲ್ಲು ಗಣಿ ಮೇಲೆ ದಾಳಿ ನಡೆಸಿ, ಕಾನೂನು ಕ್ರಮ ಕೈಗೊಳ್ಳುತ್ತೇವೆ. ರಕ್ಷಿತಾರಣ್ಯದಲ್ಲಿ ನಡೆಸುತ್ತಿರುವ ಗಣಿಗಾರಿಕೆ ವಿರುದ್ಧ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು.
ಮಹೇಶ್, ಅಧಿಕಾರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಉಡುಪಿ

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...