ಸಕಲೇಶಪುರ: ಮಂಕನಹಳ್ಳಿ ಗ್ರಾಮದ ಸರ್ವೇ ನಂ.141ರ ಕಂದಾಯ ಭೂಮಿಯಲ್ಲಿ ಖಾಸಗಿ ವ್ಯಕ್ತಿಗಳು ನಿರ್ಮಿಸಿದ್ದ ರೆಸಾರ್ಟ್ ಅನ್ನು ತಾಲೂಕು ಆಡಳಿತ ತೆರವುಗೊಳಿಸಿತು.
ಕಂದಾಯ ಭೂಮಿಯಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ ಮಾಡಲಾಗಿದೆ ಎಂದು ಸ್ಥಳೀಯರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಮೂರು ದಿನಗಳಿಂದ ಕಾರ್ಯಾಚರಣೆ ನಡೆಸಿ ಕಟ್ಟಡ ಹಾಗೂ ಬೇಲಿಯನ್ನು ತೆರವುಗೊಳಿಸಿದರು.
ಹಲವು ವರ್ಷಗಳ ಹಿಂದೆ ಸರ್ವೇ ನಂ.141ರಲ್ಲಿ ಖಾಸಗಿ ವ್ಯಕ್ತಿಗಳು ಜಾಗ ಖರೀದಿಸಿದ್ದು ಜಮೀನಿನ ಸಮೀಪದ ಕಂದಾಯ ಭೂಮಿಯಲ್ಲಿ ರೆಸಾರ್ಟ್ ನಿರ್ಮಾಣ ಮಾಡಿದ್ದರು.