More

    ಮತದಾರರ ಪಟ್ಟಿ ಅಕ್ರಮ ಪರಿಷ್ಕರಣೆ: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು​

    ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ. ಪ್ರಕರಣದ ಎಲ್ಲ ತಪ್ಪಿತಸ್ಥರನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಡಿಕೆಶಿ ಮತ್ತು ಸಿದ್ದರಾಮಯ್ಯ ನೇತೃತ್ವದ ತಂಡ ದೂರು ನೀಡಿದೆ.

    ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ, ಸೌಮ್ಯ ರೆಡ್ಡಿ, ರಿಜ್ವಾನ್ ಅರ್ಷದ್​ ಸೇರಿದಂತೆ ಹಲವು ಮುಖಂಡರು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದರು. ಮತದಾರರ ಡೇಟಾ ಸೋರಿಕೆ, ಮತ ಪಟ್ಟಿಯಿಂದ ಲಕ್ಷಾಂತರ ಮತದಾರರ ಹೆಸರು ಕೈಬಿಟ್ಟಿರುವ ಪ್ರಕರಣ ಸಂಬಂಧ ಚಿಲುಮೆ ಸಂಸ್ಥೆ, ಬಿಬಿಎಂಪಿ, ಬಿಜೆಪಿ ವಿರುದ್ಧ ಕಾಂಗ್ರೆಸ್​ ದೂರು ನೀಡಿದೆ. ಮತದಾರರ ಖಾಸಗಿ ಮಾಹಿತಿ ಕಳ್ಳತನವಾಗಿದೆ. ಸರ್ಕಾರದ ಗಮನಕ್ಕೆ ಬಂದೇ ಕಳ್ಳತನವಾಗಿದೆ. ತಕ್ಷಣ ಕ್ರಮ ಜರಗಿಸಬೇಕು ಎಂದು ಆಗ್ರಹಿಸಿದೆ. ಮುಖ್ಯಚುನಾವಣಾಧಿಕಾರಿ ಕಚೇರಿ ಮುಂದೆ ಪೊಲೀಸ್​ ಬಂದೋಬಸ್ತ್ ಮಾಡಲಾಗಿದೆ.

    ಮತದಾರರ ಮಾಹಿತಿ ಕಳ್ಳತನ ಪ್ರಕರಣದಲ್ಲಿ ಸರ್ಕಾರ ಕಳ್ಳಾಟದ ಹೇಳಿಕೆ ನೀಡುತ್ತಾ ದಿಕ್ಕುತಪ್ಪಿಸುತ್ತಿದೆ. ಚಿಲುಮೆ ಸಂಸ್ಥೆಯ ಅಕ್ರಮ ಬೆಳಕಿಗೆ ಬಂದಿರುವುದಕ್ಕೂ, ಮತದಾರ ಪಟ್ಟಿಯಲ್ಲಿ ಮತದಾರರ ಹೆಸರು ಕಾಣೆಯಾಗಿರುವುದಕ್ಕೂ ಸಂಬಂಧವಿರುವುದು ನಿಶ್ಚಿತ. ಸಿಎಂ ಬಸವರಾಜ ಬೊಮ್ಮಾಯಿ ಅವರು ಉಡಾಫೆ ಉತ್ತರ ಕೊಟ್ಟು ಜಾರಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್​ ಟ್ವೀಟ್​ ಮಾಡಿದೆ.

    ಮತದಾರರ ಪಟ್ಟಿಯಲ್ಲೂ ಭ್ರಷ್ಟತನ ಮಾಡಲಾಗಿದೆ. ಇದನ್ನು ಮಾಧ್ಯಮದ ಮುಂದೆಯೂ ಇಟ್ಟಿದ್ದೇವೆ. ಸರ್ಕಾರ ಯಾರನ್ನೂ ಇದುವರೆಗೆ ಅರೆಸ್ಟ್ ಮಾಡಿಲ್ಲ. ಹಣ ಎಣಿಸುವ ಮಿಷನ್ ಕೂಡ ಅದೇ ಕಚೇರಿಯಲ್ಲಿ ಇದೆ. ಹಣದ ಅವ್ಯವಹಾರ ಕೂಡ ಚಿಲುಮೆ ಕಚೇರಿಯಲ್ಲಿ ನಡೆದಿದೆ ಎದು ಡಿಕೆಶಿ ಕಿಡಿಕಾರಿದ್ದಾರೆ.

    ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿ… ಎನ್ನುತ್ತಲೇ ಇಂದು ನಡೆಯಬೇಕಿದ್ದ ಬಹುನಿರೀಕ್ಷಿತ ಕಾರ್ಯವನ್ನು ಮುಂದೂಡಿದ ಎಚ್​ಡಿಕೆ!

    ಇಂತಹ ಹೆಂಗಸು ನನಗೆ ಬೇಡ, ಮಗನೇ ನಿನ್ನ ಅಮ್ಮ ಸರಿಯಿಲ್ಲ, ಆಕೆ ಜತೆ ಇರಬೇಡ… ಎಂದು ಮನದ ನೋವು ಬಿಚ್ಚಿಟ್ಟು ದುರಂತ ಅಂತ್ಯ ಕಂಡ ತಂದೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts