

ಬಂಟ್ವಾಳ: ಅಕ್ರಮವಾಗಿ ಮದ್ಯ ದಾಸ್ತಾನು ಇರಿಸಿ ಮಾರಾಟ ಮಾಡುತ್ತಿದ್ದ ಅಂಗಡಿಯೊಂದಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದಾರೆ. ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ, ಅಜ್ಜಿ ಬಾಕಿಮಾರು ಸೂರ್ಯಚಂದ್ರ ಜನರಲ್ ಸ್ಟೋರ್ ಮಾಲಕಿ ಸುಜಾತ ಶೆಟ್ಟಿ ಎಂಬುವರ ಮೇಲೆ ಪ್ರಕರಣ ದಾಖಲಾಗಿದೆ. ಅವರು ಅಂಗಡಿಯಲ್ಲಿ ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡುವ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. 1,250 ರೂ. ಮೌಲ್ಯದ 2.25 ಲೀಟರ್ ಮದ್ಯ ಇರುವ ಒಟ್ಟು 25 ಸ್ಯಾಚೆಟ್‌ಗಳನ್ನು ವಶಪಡಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್‌ಸ್ಪೆಕ್ಟರ್ ಶಿವಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.