More

    ಮದ್ಯ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಡಿಸಿ ಎಸ್.ವಿಕಾಸ್ ಕಿಶೋರ್ ಸೂಚನೆ

    ಕೊಪ್ಪಳ: ಜಿಲ್ಲೆಯಲ್ಲಿ ಅನಧಿಕೃತವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಸೂಚಿಸಿದರು.

    ಮದ್ಯ ಅಕ್ರಮ ಸರಬರಾಜು ತಡೆವ ನಿಟ್ಟಿನಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮದ್ಯ ಅಕ್ರಮ ಮಾರಾಟ ಮಾಡುವ ಬಗ್ಗೆ ಸಾಕಷ್ಟು ದೂರು ಬರುತ್ತಿವೆ. ಡಾಬಾ, ಕಿರಾಣಿ ಅಂಗಡಿ, ಪಾನ್‌ಬೀಡಾ ಅಂಗಡಿ, ಹೋಟೆಲ್‌ಗಳಲ್ಲಿ ಅನಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ನಿತ್ಯ ಈ ಬಗ್ಗೆ ಸಾರ್ವಜನಿಕರು ಅಹವಾಲು ಹೊತ್ತು ಬರುತ್ತಿದ್ದಾರೆ. ದೂರುಗಳ ಬಗ್ಗೆ ನಿಯಮಾನುಸಾರ ಕ್ರಮ ಕೈಗೊಳ್ಳಿ. ಅಕ್ರಮ ಎಸಗುವವರ ವಿರುದ್ಧ ಕಠಿಣ ಕ್ರಮ ಜರುಗಿಸಿ. ಕ್ರಮ ಕೈಗೊಂಡ ಬಗ್ಗೆ ವರದಿ ಸಲ್ಲಿಸಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

    ಅಬಕಾರಿ ಉಪ ಆಯುಕ್ತೆ ವನಜಾಕ್ಷಿ ಮಾತನಾಡಿ, ಅಕ್ರಮವಾಗಿ ಮದ್ಯ ಸರಬರಾಜು ಮಾಡುವ ಬಗ್ಗೆ ದೂರುಗಳು ಬಂದಲ್ಲಿ ಪರಿಶೀಲಿಸಲಾಗುತ್ತಿದೆ. ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾದ ಸನ್ನದುದಾರರ ಹಾಗೂ ಆರೋಪಿಗಳ ವಿರುದ್ಧ ಅಬಕಾರಿ ಕಾಯ್ದೆಯಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಅಕ್ರಮವಾಗಿ ಮದ್ಯ ಸರಬರಾಜು ಮಾಡುವ ಸನ್ನದುದಾರರ ಸನ್ನದುಗಳನ್ನು ಅಮಾನತು ಅಥವಾ ರದ್ದುಪಡಿಸಲು ಕ್ರಮ ಜರುಗಿಸುತ್ತೇವೆ ಎಂದು ತಿಳಿಸಿದರು. ಅಬಕಾರಿ ಉಪ ಅಧೀಕ್ಷಕ ಎಸ್.ಎಂ. ಮಹೇಶ ಸೇರಿ ಅಬಕಾರಿ ನಿರೀಕ್ಷಕರು ಹಾಗೂ ಉಪ ನಿರೀಕ್ಷಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts