More

    ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ


    ಬೆಳಗಾವಿ: ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ, ಜೂಜಾಟ ತಡೆಗೆ ಮತ್ತು ಸಾರಿಗೆ ಬಸ್ ನಿಲ್ದಾಣಗಳಲ್ಲಿ ಬೇಕಾಬಿಟ್ಟಿ ಬೈಕ್ ಓಡಿ ಕಿರಿಕಿರಿ ಉಂಟು ಮಾಡುತ್ತಿರುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದರು.
    ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಶನಿವಾರ 11ನೇ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರ ದೂರುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಹಳ್ಳಿಗಳಲ್ಲಿನ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುಲು ಆಯಾ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಾರಿಗೆ ಬಸ್ ನಿಲ್ದಾಣಗಳಿಗೆ ಭದ್ರತೆ ನೀಡಲಾಗುವುದು ಎಂದು ಹೇಳಿದರು.

    ಸುನ್ನಾಳ, ಮುರಗೋಡ, ಮಾಂಗೂರ, ದುರದುಂಡಿ, ಸಂಬರಗಿ, ಐನಾಪುರ, ಸಾರಾಪುರ, ಗಣೇಶವಾಡಿ, ಯಕ್ಸಂಬಾ, ರಾಮದುರ್ಗ, ಚಿಕ್ಕೋಡಿ, ಸವದತ್ತಿ ಸೇರಿ ವಿವಿಧ ಗ್ರಾಮಗಳಿಂದ ಅಕ್ರಮ ಮದ್ಯ ಮಾರಾಟ, ಜೂಜಾಟ, ಆಸ್ತಿ ವಿವಾದ, ಬಸ್ ನಿಲ್ದಾಣಗಳಲ್ಲಿ ಬೈಕ್ ಸವಾರರ ಕಿರಿಕಿರಿ ಹಾಗೂ ವಾಹನಗಳ ಕಳ್ಳತನ ಕುರಿತು ಬರೋಬ್ಬರಿ 36 ಜನರು ನೀಡಿದ ದೂರಿಗೆ ಜಿಲ್ಲಾ ವರಿಷ್ಠಾಧಿಕಾರಿ ಸ್ಪಂಧಿಸಿ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು.

    ನಗರದ ಶಹಾಪುರದ ವ್ಯಕ್ತಿಯೋರ್ವ ಆಸ್ತಿ ಮಾರಾಟ ಮಾಡಿದ್ದೇನೆ. ಆದರೆ ಕೆಲವರು ಬೆದರಿಕೆ ಹಾಕುತ್ತಿದ್ದಾರೆ. ನ್ಯಾಯಾಲಯದಲ್ಲಿ ತೀರ್ಪು ನಮ್ಮ ಪರವಾಗಿದ್ದರೂ ಕೆಲವರು ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ದೂರಿದರು. ಅದಕ್ಕೆ ಸ್ಪಂದಿಸಿದ ಎಸ್ಪಿ ಸಂಜೀವ, ನಿಮ್ಮ ಆಸ್ತಿ ವಿಚಾರದಲ್ಲಿ ಪೊಲೀಸರು ಹಸ್ತಕ್ಷೇಪ ಮಾಡಲು ಬರುವುದಿಲ್ಲ. ನಿಮಗೆ ಬೆದರಿಕೆ ಹಾಕುತ್ತಿದ್ದರೆ ನ್ಯಾಯಾಲಯದ ಅನುಮತಿ ಪಡೆದು ಪೊಲೀಸರ ರಕ್ಷಣೆ ನೀಡುತ್ತಾರೆ ಎಂದರು.

    ಬೈಲಹೊಂಗಲ ತಾಲೂಕಿನ ಗದ್ದಿಕೊರವಿನ ಕೊಪ್ಪದ ಆಸ್ತಿ ವಾಜ್ಯಕ್ಕೆ ಸಂಬಂಧಿಸಿದಂತೆ ಸಹೋದರ್ ಕಿರುಕುಳ ನೀಡುತ್ತಿದ್ದಾರೆ ಎಂದು ಕರೆ ಮಾಡಿ ದೂರಿದರು. ಅದಕ್ಕೆ ಸ್ಪಂದಿಸಿದ ಎಸ್ಪಿ ಅವರು ನ್ಯಾಯಾಲಯದ ವಿಷಯದಲ್ಲಿ ಪೊಲೀಸರು ಹಸ್ತಕ್ಷೇಪ ಮಾಡಲು ಬರುವುದಿಲ್ಲ ನ್ಯಾಯಾಲಯದಲ್ಲಿ ಬಗೆ ಹರಿಸಿಕೊಳ್ಳಿ ಎಂದರು.

    ಗದಗ ಜಿಲ್ಲೆಯ ವ್ಯಕ್ತಿಯೋರ್ವ ಕರೆ ಮಾಡಿ ರೇಷ್ಮೆ ಬೆಳೆಗಾರರು ಗದಗನಿಂದ ರಾಮನಗರಕ್ಕೆ ರೇಷ್ಮೆ ಮಾರಾಟ ಮಾಡುತ್ತೇವೆ. ಅಲ್ಲಿ ದಳ್ಳಾಳಿಗಳು, ದಬ್ಬಾಳಿಕೆ ಮಾಡಿ ತೂಕದಲ್ಲಿ ಮೋಸ ಮಾಡುತ್ತಿದ್ದಾರೆ. ನಮ್ಮ ಸಮಸ್ಯೆ ಬಗೆಹರಿಸಿಕೊಡಬೇಕೆಂದು ತಿಳಿಸಿದರು. ರಾಮನಗರ ಎಸ್ಪಿ ಅವರೊಂದಿಗೆ ಮಾತನಾಡುವೆ. ನೀವು ಒಂದು ಸಾರಿ ಕರೆ ಮಾಡಿ ದೂರು ನೀಡಿ ಎಂದು ಸಂಜೀವ್ ತಿಳಿಸಿದರು. ಪೊಲೀಸ್ ಇನ್ಸ್‌ಸ್ಪೆಕ್ಟರ್‌ಗಳಾದ ಮಹಾದೇವ ಎಸ್.ಎಂ., ಶರಣಬಸಪ್ಪ ಅಜೂರ, ಬಾಳಪ್ಪ ತಳವಾರ, ವಿಠ್ಠಲ ಮಾದರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts