More

    ಕೇರಳಕ್ಕೆ ಅಕ್ರಮವಾಗಿ ಯೂರಿಯಾ ಮಾರಾಟ

    ಹುಣಸೂರು: ರೈತರಿಗೆ ಅಗತ್ಯವಿರುವ ಯೂರಿಯಾ ರಸಗೊಬ್ಬರ ಅಕ್ರಮವಾಗಿ ಕೇರಳಗೆ ಸರಬರಾಜು ಆಗುತ್ತಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಆರೋಪಿಸಿದ್ದಾರೆ.

    ಯೂರಿಯಾ ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ಸರಬರಾಜು ಆಗಿದೆ. ಆದರೆ ಸಗಟು ವ್ಯಾಪಾರಸ್ಥರು ಹೆಚ್ಚಿನ ಲಾಭಕ್ಕಾಗಿ ಚಿಲ್ಲರೆ ಮಾರಾಟಗಾರರಿಗೆ ಸಮರ್ಪಕವಾಗಿ ವಿತರಣೆ ಮಾಡದೆ ಕೇರಳ ರಾಜ್ಯದ ಪ್ಲೇವುಡ್ ಕೈಗಾರಿಕೋದ್ಯಮಿಗಳಿಗೆ ಅಕ್ರಮವಾಗಿ ಮಾರಾಟ ಮಾಡುವ ಮೂಲಕ ಸ್ಥಳೀಯ ರೈತರಿಗೆ ತೊಂದರೆ ನೀಡುತ್ತಿದ್ದಾರೆ. ಕರ್ನಾಟಕ ಮತ್ತು ಕೇರಳ ರಾಜ್ಯಗಳ ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಅಕ್ರಮ ಸಾಗಣೆಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ತಾಲೂಕು ಆಡಳಿತ ಈ ಕೂಡಲೇ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆಯನ್ನು ಮತ್ತಷ್ಟು ಬಲಪಡಿಸಿ ರೈತರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕೆಂದು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

    ಈ ಕುರಿತು ‘ವಿಜಯವಾಣಿ’ಯೊಂದಿಗೆ ಮಾತನಾಡಿದ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಜೆ.ವೆಂಕಟೇಶ್, ಕಳೆದ ವಾರ ತಾಲೂಕಿನಲ್ಲಿ ಸಾಕಷ್ಟು ಮಳೆಯಾಗಿದ್ದು, ಒಂದೇ ಬಾರಿಗೆ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಉಂಟಾಗಿದೆ. ಇಂದು ಅಥವಾ ನಾಳೆಯೊಳಗೆ ಸಾಕಷ್ಟು ಪ್ರಮಾಣದಲ್ಲಿ ಯೂರಿಯಾ ಸರಬರಾಜು ಆಗಲಿದೆ. ಯಾವುದೇ ಅಕ್ರಮಕ್ಕೆ ಅವಕಾಶ ನೀಡುವುದಿಲ್ಲ. ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ನಡೆಸಲಾಗುತ್ತಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲವೆಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts