ವಿದೇಶದಿಂದ ಚಿನ್ನ ಅಕ್ರಮ ಸಾಗಣೆ; 2.8 ಕೆ.ಜಿ. ಬಂಗಾರ ಜಪ್ತಿ

0 Min Read
ವಿದೇಶದಿಂದ ಚಿನ್ನ ಅಕ್ರಮ ಸಾಗಣೆ; 2.8 ಕೆ.ಜಿ. ಬಂಗಾರ ಜಪ್ತಿ

ಬೆಂಗಳೂರು: ವಿದೇಶದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಮಾನದಲ್ಲಿ ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದ 11 ಮಹಿಳೆಯರು ಸೇರಿ 12 ಮಂದಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಇತ್ತೀಚೆಗೆ ಮದೀನದಿಂದ ಮಸ್ಕತ್ ಮೂಲಕ ಕೆಐಎಗೆ ಬಂದಿಳಿದ ವಿಮಾನದಲ್ಲಿ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಇದರಲ್ಲಿ 11 ಮಹಿಳೆಯರು ಮತ್ತು ಓರ್ವ ಪುರುಷ ಚಿನ್ನ ಕಳ್ಳ ಸಾಗಿಸುತ್ತಿದ್ದುದು ಬೆಳಕಿಗೆ ಬಂದಿದೆ.

ಕೂಲಂಕಷವಾಗಿ ಪರಿಶೀಲನೆ ನಡೆಸಿದಾಗ ಆರೋಪಿಗಳಿಂದ 1.29 ಕೋಟಿ ರೂ. ಮೌಲ್ಯದ 2.8 ಕೆ.ಜಿ. ಚಿನ್ನ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

See also  ವಸತಿ ನಿಲಯ ನಿರ್ಮಾಣಕ್ಕೆ ಅಗತ್ಯ ನೆರವು
Share This Article