More

    ಸ್ವರ್ಣಾ ನದಿಯಲ್ಲಿ ಅಕ್ರಮ ಮರಳುಗಾರಿಕೆ

    ಉಡುಪಿ: ಹಿರಿಯಡ್ಕ ಸಮೀಪ ಸ್ವರ್ಣಾ ನದಿಯಿಂದ ಬಜೆ ಡ್ಯಾಂ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ತನಿಖೆ ನಡೆಸುವಂತೆ ಮಂಗಳವಾರ ಜಿಲ್ಲಾಧಿಕಾರಿ, ಎಸಿಬಿ ಹಾಗೂ ಲೋಕಾಯುಕ್ತಕ್ಕೆ ನಗರಸಭಾ ಸದಸ್ಯ ರಮೇಶ್ ಕಾಂಚನ್ ನೇತೃತ್ವದಲ್ಲಿ ದೂರು ಸಲ್ಲಿಸಲಾಯಿತು.

    ಸ್ವರ್ಣಾ ನದಿಯಿಂದ ಬಜೆ ಅಣೆಕಟ್ಟಿನ ಮೂಲಕ ಪೂರೈಕೆ ಪ್ರದೇಶದಲ್ಲಿ ಹೂಳು ತುಂಬಿದ್ದು, ನೀರಿನ ಹರಿಯುವಿಕೆಗೆ ತೊಂದರೆಯಾಗುತ್ತದೆಂಬ ನೆಪದಲ್ಲಿ ಉಡುಪಿ ನಗರಸಭೆಯು ಹೂಳೆತ್ತುವ ಬಗ್ಗೆ ಪತ್ರಿಕೆಯಲ್ಲಿ ಟೆಂಡರ್ ಪ್ರಕಟಣೆ ನೀಡಿರುತ್ತದೆ. ಗುತ್ತಿಗೆ ನೀಡಿರುವ ಪ್ರಕ್ರಿಯೆ ಕಾನೂನುಬಾಹಿರವಾಗಿದೆ. ಗೋಕುಲ್‌ದಾಸ್ ಶೆಟ್ಟಿ ಎಂಬುವರ ಕ್ರಮಬದ್ಧ ಹಾಗೂ ಅರ್ಹ ಗುತ್ತಿಗೆ ನೀಡಲಾಗಿರುತ್ತದೆ. ಟೆಂಡರ್ ಪ್ರಕ್ರಿಯೆ ಕಾನೂನು ನಿಯಮಾವಳಿಗಳ ಸ್ಪಷ್ಟ ಉಲ್ಲಂಘನೆಯಾಗಿದ್ದು, ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಮಂಗಳೂರಿನ ಸಂಸ್ಥೆಗೆ ಹೂಳೆತ್ತಲು ಅನುಮತಿ ನೀಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಹೂಳು ತೆಗೆಯುವ ಬದಲಿಗೆ ಮರಳನ್ನು ಅಕ್ರಮವಾಗಿ ತೆಗೆದು ಉಡುಪಿ ಹಾಗೂ ಇತರ ಪ್ರದೇಶಗಳಲ್ಲಿ ಹಾಗೂ ಕಾಡಿನ ಮಧ್ಯಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ಶೇಖರಿಸಿಡಲಾಗಿದೆ. ಈಗಾಗಲೇ ಕೋಟ್ಯಂತರ ರೂ. ಮೌಲ್ಯದ ಸಾವಿರಾರು ಲೋಡ್‌ಗಳಷ್ಟು ಮರಳನ್ನು ಅಕ್ರಮ ಸಾಗಾಟ ಮಾಡಲಾಗಿದೆ.

    ಹಗರಣದಲ್ಲಿ ಒಳಗೊಂಡಿರುವ ಅಧಿಕಾರಿಗಳು, ಗುತ್ತಿಗೆದಾರರು, ಜನಪ್ರತಿನಿಧಿಗಳು ಹಾಗೂ ಪ್ರಭಾವಿ ವ್ಯಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಗೆ ದೂರು ಸಲ್ಲಿಸುವ ಸಂದರ್ಭ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ನಗರಸಭಾ ಸದಸ್ಯ ರಮೇಶ್ ಕಾಂಚನ್, ಕಾಂಗ್ರೆಸ್ ನಾಯಕರಾದ ಮುರಳಿ ಶೆಟ್ಟಿ , ಹರೀಶ್ ಕಿಣಿ, ವಿಶ್ವಾಸ್ ಅಮೀನ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts