Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಅನಾರೋಗ್ಯಕ್ಕೀಡಾದ ಸಚಿವ ಡಿ.ಕೆ.ಶಿವಕುಮಾರ್​

Tuesday, 18.09.2018, 2:35 PM       No Comments

ರಾಮನಗರ: ಸಚಿವ ಡಿ.ಕೆ.ಶಿವಕುಮಾರ್​ ವಿರುದ್ಧ ಇಡಿ ಎಫ್​ಐಆರ್​ ದಾಖಲಿಸಿದ್ದು ಡಿಕೆಶಿಗೆ ಬಂಧನದ ಭೀತಿ ಎದುರಾಗಿರುವ ಬೆನ್ನಲ್ಲೇ ಆರೋಗ್ಯವೂ ಹದಗೆಟ್ಟಿದೆ. ಫುಡ್​ಪಾಯ್ಸನ್​ನಿಂದ ವಿಪರೀತ ವಾಂತಿಯಾಗುತ್ತಿದ್ದು ಮನೆಯಲ್ಲೇ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಡಿ.ಕೆ.ಶಿವಕುಮಾರ್​ ಹಾಗೂ ಡಿ.ಕೆ.ಸುರೇಶ್​ ಇಬ್ಬರೂ ಕನಕಪುರ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಇದಕ್ಕೂ ಮೊದಲು ಹೈದರಾಬಾದ್​ನಿಂದ ಬೆಂಗಳೂರಿಗೆ ಬರುವಾಗ ಉಪಹಾರ ಸೇವಿಸಿದ್ದ ಸಚಿವರಿಗೆ ಫುಡ್​ಪಾಯ್ಸ​ನ್​ ಆಗಿದ್ದು ಆರೋಗ್ಯ ಹದಗೆಟ್ಟಿದೆ. ಹಾಗಾಗಿ ಕಾರ್ಯಕ್ರಮಕ್ಕೆ ತೆರಳದೆ ಕನಕಪುರ ಮನೆಯಲ್ಲೇ ಉಳಿದಿದ್ದಾರೆ. ಅಲ್ಲಿಯೇ ವೈದ್ಯರನ್ನು ಕರೆಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಡಿಕೆ ಸಹೋದರರ ಬದಲಿಗೆ ವಿಧಾನ ಪರಿಷತ್​ ಸದಸ್ಯ ಎಸ್​. ರವಿ ಕಾರ್ಯಕ್ರಮ ಉದ್ಘಾಟಿಸಿದರು.

Leave a Reply

Your email address will not be published. Required fields are marked *

Back To Top