More

    ಆಹಾರ ಪದ್ಧತಿ ಬದಲಾಗದಿದ್ದರೆ ಅನಾರೋಗ್ಯ

    ಸೊರಬ: ಇತ್ತೀಚಿನ ದಿನಗಳಲ್ಲಿ ಆರೋಗ್ಯದಲ್ಲಿ ಅತಿ ಹೆಚ್ಚು ಸಮಸ್ಯೆ ಕಂಡು ಬರುತ್ತಿದ್ದು ನಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳುವ ಅಗತ್ಯವಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಡಾ. ಪದ್ಮಾವತಿ ಹೇಳಿದರು.

    ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಿರಿಧಾನ್ಯ ಬಳಕೆ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆಯುವಂತಹ ಸಿರಿಧಾನ್ಯಗಳನ್ನು ಬಳಕೆ ಮಾಡುವುದರಿಂದ ಮಧುಮೇಹ, ರಕ್ತದೊತ್ತಡದಂತಹ ಅನೇಕ ಕಾಯಿಲೆಗಳನ್ನು ತಡೆಗಟ್ಟಲು ಅನುಕೂಲವಾಗುತ್ತದೆ ಎಂದರು.
    ತಾಲೂಕು ಯೋಜನಾಧಿಕಾರಿ ಸುಬ್ರಾಯ ನಾಯ್ಕ ಮಾತನಾಡಿ, ಸಂಸ್ಥೆಯು ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು, ಇದರ ಪ್ರಯೋಜನವನ್ನು ಹೆಚ್ಚಿನ ಜನರು ಪಡೆದುಕೊಳ್ಳುತ್ತಿದ್ದಾರೆ ಎಂದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಶೋಭಾ, ವಲಯ ಮೇಲ್ವಿಚಾರಕ ಉಮೇಶ್ ಪೂಜಾರಿ, ಆರೋಗ್ಯ ಇಲಾಖೆ ತಾಲೂಕು ನೋಡಲ್ ಅಧಿಕಾರಿ ಮೇಘರಾಜ್, ಸೇವಾಪ್ರತಿನಿಧಿ ಜೆಸಿಂತಾ, ಸಾವಿತ್ರಮ್ಮ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts