ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಖರ್ಗೆ ಆಗ್ರಹ

ತುಮಕೂರು: ಪೂಜ್ಯ ಸಿದ್ಧಗಂಗಾ ಶ್ರೀಗಳು ಸಮಾಜಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ. ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಒತ್ತಾಯ ಮಾಡುತ್ತೇನೆ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಸಿದ್ಧಗಂಗಾ ಆಸ್ಪತ್ರೆಗೆ ಭೇಟಿ ನೀಟಿ ಶ್ರೀಗಳ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಶ್ತೀಗಳಿಗೆ ಸ್ವಲ್ಪ ಉಸಿರಾಟದ ತೊಂದರೆ ಇದೆ. ವಿಶೇಷವಾಗಿ ಆಪರೇಷನ್ ಆದ ಮೇಲೆ ಉಸಿರಾಟಕ್ಕೆ ತೊಂದರೆ ಆಗಿದೆ. ವೈದ್ಯರು ಉತ್ತಮ ರೀತಿಯ ಚಿಕಿತ್ಸೆ ನೀಡುತಿದ್ದಾರೆ. ಶ್ರೀಗಳು ಬೇಗ ಗುಣಮುಖರಾಗುತ್ತಾರೆ ಎನ್ನುವ ಭರವಸೆ ಇದೆ ಎಂದರು.

ವಿದ್ಯಾದಾನ ಮಾಡುವ ಶಕ್ತಿ ಅವರಿಗಿದೆ. ಪಕ್ಷದ ಮುಖಂಡನಾಗಿ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ. ಶ್ರೀಗಳಿಗೆ ಭಾರತ ರತ್ನ ಕೊಡುವಂತೆ ಪಕ್ಷಾತೀತವಾಗಿ ಒತ್ತಾಯ ಮಾಡಬೇಕಿದೆ ಎಂದು ತಿಳಿಸಿದರು. (ದಿಗ್ವಿಜಯ ನ್ಯೂಸ್)