ಟ್ರೈನಿ ವೈದ್ಯೆ ಅತ್ಯಾಚಾರ-ಹತ್ಯೆ ಕೇಸ್​: ಆ. 17ರಂದು ದೇಶವ್ಯಾಪಿ ವೈದ್ಯರ ಮುಷ್ಕರಕ್ಕೆ ಐಎಂಎ ಕರೆ! ಹಲವು ಸೇವೆಗಳು ಸ್ಥಗಿತ

ವಿಜಯವಾಣಿ - 2024-08-16T080222.370
Published on

ಕೊಲ್ಕತ್ತಾ: ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ನಡೆದ ಭೀಕರ ಅತ್ಯಾಚಾರ ಹಾಗೂ ಹತ್ಯೆ ಘಟನೆಯನ್ನು ಖಂಡಿಸಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಪ್ರತಿಭಟನೆ ಕೈಗೊಂಡಿರುವ ಮಹಿಳಾ ವೈದ್ಯರು, ಸ್ವಾತಂತ್ರ್ಯೋತ್ಸವ ದಿನದಂದು ಕೂಡ ನ್ಯಾಯಕ್ಕಾಗಿ ಹೋರಾಟ ಮುಂದುವರೆಸಿದ್ದಾರೆ. ಈ ಎಲ್ಲಾ ಬೆಳವಣಿಗೆಯನ್ನು ಕಂಡ ಭಾರತೀಯ ವೈದ್ಯಕೀಯ ಸಂಘವು, ನಾಳೆ (ಆಗಸ್ಟ್ 16) ಬೆಳಗ್ಗೆ 6 ಗಂಟೆಯಿಂದ 24 ಗಂಟೆಗಳ ಅವಧಿ ದೇಶವ್ಯಾಪಿ ತುರ್ತು ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ.

ಅಗತ್ಯ ಸೇವೆಗಳನ್ನು ಹೊರತುಪಡಿಸಿದರೆ ಉಳಿದ್ಯಾವುದು ಕೂಡ ಕಾರ್ಯನಿರ್ವಹಿಸುವುದಿಲ್ಲ. ಆ.17ರ ಬೆಳಗ್ಗೆ 6ರಿಂದ ಆ.18ರ ಬೆಳಗ್ಗೆ 6ರವರೆಗೆ ಬಹುತೇಕ ಸೇವೆಗಳು ಲಭ್ಯವಿರುವುದಿಲ್ಲ. ಇದು ಸಾರ್ವಜನಿಕರ ಗಮನದಲ್ಲಿರಲಿ ಎಂದು ನಾವು ತಿಳಿಸುತ್ತಿದ್ದೇವೆ ಎಂದು ಐಎಂಎ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net