More

    ಐಎಂಎ ಬಹುಕೋಟಿ ಹಗರಣ- ಮಾಜಿ ಸಚಿವ ರೋಷನ್ ಬೇಗ್ ನಿವಾಸದಲ್ಲಿ ಸಿಬಿಐ ಶೋಧ

    ಬೆಂಗಳೂರು: ಹೂಡಿಕೆದಾರರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವಂಚಿಸಿದ ಐಎಂಎ ಬಹುಕೋಟಿ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಇಂದು ಬೆಳಗ್ಗೆಯೇ ಮಾಜಿ ಸಚಿವ ರೋಷನ್ ಬೇಗ್ ಮನೆಗೆ ದಾಳಿ ನಡೆಸಿದ್ದಾರೆ.

    ಬೆಂಗಳೂರಿನ ಪುಲಿಕೇಶಿನಗರದ ಕೋಲ್ಸ್ ಪಾರ್ಕ್ ಸಮೀಪವೇ ರೋಷನ್ ಬೇಗ್ ನಿವಾಸ ಇದ್ದು, ಅಲ್ಲಿಗೆ ಇಂದು ಬೆಳಗ್ಗೆಯೇ ಸಿಬಿಐನ ಏಳು ಅಧಿಕಾರಿಗಳ ತಂಡ ತೆರಳಿದ್ದು, ಶೋಧ ಕಾರ್ಯ ನಡೆಸುತ್ತಿದೆ. ರೇಡ್​ಗೆ ಸಂಬಂಧಿಸಿ ಬೇಗ್ ಅವರ ಪತ್ನಿಗೆ ಮಾಹಿತಿ ನೀಡಿ ಮನವರಿಕೆ ಮಾಡಿದ ಅಧಿಕಾರಿಗಳು ಮನೆಯಲ್ಲಿ ದಾಖಲೆಗಳು, ಸಾಕ್ಷ್ಯಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

    ಇದನ್ನೂ ಓದಿ: ಐಎಂಎ ಮಹಾ ವಂಚನೆಗೆ ಮೌಲ್ವಿಗಳು, ಅಧಿಕಾರಿಗಳೇ ಶ್ರೀರಕ್ಷೆ

    ಕೋರ್ಟ್​ನಿಂದ ಸರ್ಚ್ ವಾರೆಂಟ್ ಹಿಡಿದುಕೊಂಡೇ ಹೋದ ಅಧಿಕಾರಿಗಳು ಮನೆಯವರೆಲ್ಲರ ಮೊಬೈಲ್ ಫೋನ್​ಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಅಲ್ಲದೆ, ಪ್ರತಿ ಚಟುವಟಿಕೆಯ ವಿಡಿಯೋ ಚಿತ್ರೀಕರಣವನ್ನೂ ಮಾಡಿಕೊಳ್ಳುತ್ತಿದ್ದಾರೆ. ನಿನ್ನೆ ಬೆಳಗ್ಗೆ ರೋಷನ್ ಬೇಗ್ ಅವರನ್ನು ವಿಚಾರಣೆಗೆ ಕರೆಯಿಸಿಕೊಂಡ ಸಿಬಿಐ ಅಧಿಕಾರಿಗಳು ಬಳಿಕ ಅವರನ್ನು ಬಂಧಿಸಿ ಕೋರಮಂಗಲದಲ್ಲಿರುವ ನ್ಯಾಯಾಧೀಶರ ಮನೆಗೆ ಕರೆದೊಯ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. (ದಿಗ್ವಿಜಯ ನ್ಯೂಸ್)

    ಮಾಜಿ ಸಚಿವ ರೋಷನ್ ಬೇಗ್​ಗೆ 14 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ರವಾನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts