23.2 C
Bangalore
Saturday, December 14, 2019

ಬೇಗ್ ಬಂಧನ?: ಬರ್ತ್ ಡೇ ದಿನವೇ ಎಸ್​ಐಟಿ ವಶಕ್ಕೆ

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ದೊಡ್ಡ ಕುಳಗಳು ಒಬ್ಬೊಬ್ಬರಾಗಿ ಎಸ್​ಐಟಿ ಬಲೆಗೆ ಬೀಳುತ್ತಿದ್ದಾರೆ. ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಎಲ್.ಸಿ.ನಾಗರಾಜು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ ಶಂಕರ್ ಬಂಧನದ ಬೆನ್ನಲ್ಲೇ ಕಾಂಗ್ರೆಸ್​ನ ಪ್ರಭಾವಿ ಮುಖಂಡ ಹಾಗೂ ಶಾಸಕ ರೋಷನ್ ಬೇಗ್ ಅವರನ್ನು ವಿಶೇಷ ತನಿಖಾ ತಂಡ ವಶಕ್ಕೆ ಪಡೆದಿದೆ. ರೋಷನ್ ಬೇಗ್ ಅವರ ಹುಟ್ಟುಹಬ್ಬದ ದಿನವಾದ ಸೋಮವಾರವೇ ಬೇಗ್ ಎಸ್​ಐಟಿ ಅತಿಥಿಯಾಗಿದ್ದಾರೆ. ಕಾಂಗ್ರೆಸ್​ನ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಬೇಗ್ ಇತ್ತೀಚೆಗೆ ಬಂಡಾಯ ಅಭ್ಯರ್ಥಿಗಳ ಜತೆ ಗುರುತಿಸಿಕೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು. ಈ ನಡೆಯೇ ಅವರಿಗೆ ಮುಳುವಾಯಿತೆಂಬ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ.

ಜು.15ಕ್ಕೆ ವಿಚಾರಣೆಗೆ ಹಾಜರಾಗುವಂತೆ ಎಸ್​ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದರೂ ಹಜ್ ಯಾತ್ರೆ ಹಾಗೂ ಅನಾರೋಗ್ಯದ ನೆಪವೊಡ್ಡಿ ಜು.25ರವರೆಗೆ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಕೋರಿಕೆ ನಿರಾಕರಿಸಿದ್ದ ಎಸ್​ಐಟಿ ಜು.19ಕ್ಕೆ ಬರುವಂತೆ 3ನೇ ನೋಟಿಸ್ ಜಾರಿ ಮಾಡಿತ್ತು. ಆದರೆ, ಸೋಮವಾರ ರಾತ್ರಿಯೇ ವಿಶೇಷ ವಿಮಾನದ ಮೂಲಕ ನಿಗೂಢ ಸ್ಥಳಕ್ಕೆ ಹೊರಟಿದ್ದ ಬೇಗ್ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಐಎಂಎ ಬಹುಕೋಟಿ ವಂಚನೆ ಸಂಬಂಧ ರೋಷನ್ ಬೇಗ್ ಸಚಿವರಾಗಿದ್ದ ವೇಳೆ ನೆರವು ನೀಡುವುದಾಗಿ ಭರವಸೆ ಕೊಟ್ಟು 400 ಕೋಟಿ ರೂ. ವಸೂಲಿ ಮಾಡಿದ್ದಾಗಿ ದುಬೈನಲ್ಲಿ ತಲೆಮರೆಸಿಕೊಂಡಿರುವ ಮನ್ಸೂರ್ ಖಾನ್ ವಿಡಿಯೋ ಬಿಡುಗಡೆ ಮಾಡಿ ಆರೋಪಿಸಿದ್ದ. ತನಿಖೆ ನಡೆಸಿದ ಎಸ್​ಐಟಿ ಅಧಿಕಾರಿಗಳಿಗೆ ಬೇಗ್ ವಿರುದ್ಧದ ಆರೋಪಗಳಿಗೆ ಸಾಕ್ಷ್ಯಾಧಾರಗಳು ಲಭ್ಯವಾಗಿದ್ದವು ಎನ್ನಲಾಗಿದೆ. ಆರೋಪದ ಸಂಬಂಧ ಹೇಳಿಕೆ ದಾಖಲಿಸಿಕೊಳ್ಳಲು ರೋಷನ್ ಬೇಗ್​ಗೆ ಎಸ್​ಐಟಿ 2 ಬಾರಿ ನೋಟಿಸ್ ನೀಡಿತ್ತು. ಹಜ್ ಯಾತ್ರೆ

ಮತ್ತು ಅನಾರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ವಿಚಾರಣೆಗೆ ಬರಲು ಆಗುತ್ತಿಲ್ಲ. 15 ದಿನ ಕಾಲಾವಕಾಶ ಕೋರಿದ್ದರು. ಇದಕ್ಕೆ ನಿರಾಕರಿಸಿದ್ದ ಎಸ್​ಐಟಿ, ಜು.15ರಂದು ಆಗಮಿಸುವಂತೆ ಸೂಚಿಸಿ 2ನೇ ಬಾರಿ ನೋಟಿಸ್ ಕೊಟ್ಟಿತ್ತು.

ಮುಖ್ಯಮಂತ್ರಿ ಟ್ವೀಟ್

ವಿಮಾನ ನಿಲ್ದಾಣದಲ್ಲಿ ರೋಷನ್ ಬೇಗ್ ಜತೆ ಮಾಜಿ ಶಾಸಕ ಯೋಗೀಶ್ವರ್, ಮಾಜಿ ಸಿಎಂ ಯಡಿಯೂರಪ್ಪ ಅವರ ಆಪ್ತ ಸಹಾಯಕ ಸಂತೋಷ್ ಅವರಿದ್ದರು. ಎಸ್​ಐಟಿ ಅಧಿಕಾರಿಗಳನ್ನು ನೋಡಿದ ನಂತರ ಬೇಗ್​ರಿಂದ ಅಂತರ ಕಾಯ್ದುಕೊಂಡರು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಬೇಗ್ ತಲೆಮರೆಸಿಕೊಳ್ಳಲು ಸಹಾಯ ಮಾಡುತ್ತಿರುವ ಬಿಜೆಪಿ ನಾಯಕರ ಬಣ್ಣ ಇದರಿಂದ ಬಯಲಾಗಿದೆ ಎಂದು ಟ್ವೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಪೊಲೀಸ್ ಭದ್ರತೆ ಕೊಟ್ರೆ ಭಾರತಕ್ಕೆ ಬರ್ತೀನಿ

ಬೆಂಗಳೂರು: ದುಬೈನಲ್ಲಿ ತಲೆಮರೆಸಿಕೊಂಡಿರುವ ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಸೋಮವಾರ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದು, ಸಮಾಜಘಾತುಕರಿಂದ ಪೊಲೀಸರು ತನಗೆ ರಕ್ಷಣೆ ನೀಡುವುದಾಗಿ ಭರವಸೆ ನೀಡಿದರೆ 24 ಗಂಟೆಯೊಳಗೆ ಭಾರತಕ್ಕೆ ವಾಪಸಾಗುತ್ತೇನೆ ಎಂದು ಹೇಳಿದ್ದಾನೆ.

ವಿಡಿಯೋದಲ್ಲಿ ಯಾರ ಹೆಸರನ್ನೂ ಉಲ್ಲೇಖಿಸದೆ ಕೆಲ ರಾಜಕಾರಣಿಗಳು ಮತ್ತು ಸಮಾಜಘಾತುಕರಿಂದ ತನಗೆ ಮೋಸವಾಗಿದೆ. ಅವರಿಂದ ತನಗೆ ಜೀವ ಭಯವಿದೆ. ರಕ್ಷಣೆ ಕೊಡುವುದಾದರೆ ಭಾರತಕ್ಕೆ ಬರುತ್ತೇನೆ ಎಂದು ಏಳು ನಿಮಿಷಗಳ ಅವಧಿಯ ವಿಡಿಯೋದಲ್ಲಿ ಹೇಳಿದ್ದಾನೆ.

ದೇಶಬಿಟ್ಟು ಬಂದು ತಪು್ಪ ಮಾಡಿದೆ..: ಐಎಂಎ ಗ್ರೂಪ್ ಹೆಸರಿನ ಯೂಟ್ಯೂಬ್ ಖಾತೆಯಲ್ಲಿ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ‘ದೇಶ ಬಿಟ್ಟು ಬರಬಾರದಿತ್ತು. ಇದು ನನ್ನ ದೊಡ್ಡ ತಪು್ಪ. ಆದರೆ, ಅಂದಿನ ಅನಿವಾರ್ಯ ಪರಿಸ್ಥಿತಿ ನನ್ನನ್ನು ದೇಶ ಬಿಟ್ಟು ಬರುವಂತೆ ಮಾಡಿಸಿದೆ. 24 ಗಂಟೆಗಳಲ್ಲಿ ದೇಶಕ್ಕೆ ವಾಪಸಾಗುತ್ತೇನೆ. ಆದರೆ, ಸಮಾಜಘಾತುಕ ಶಕ್ತಿಗಳಿಂದ ನನಗೆ ರಕ್ಷಣೆ ನೀಡಬೇಕು. ದೇಶದ ಕಾನೂನಿನ ಮೇಲೆ ಅಪಾರ ಗೌರವ ಮತ್ತು ನಂಬಿಕೆ ಇದೆ. ಕಂಪನಿ ನಡೆಸುತ್ತಿದ್ದ ಸಂದರ್ಭದಲ್ಲಿ ಕೆಲ ರಾಜಕಾರಣಿಗಳು ಹಾಗೂ ಸಮಾಜಘಾತುಕ ಶಕ್ತಿಗಳು ನನ್ನನ್ನು ಬೆದರಿಸಿ ಕೋಟ್ಯಂತರ ರೂ. ಸುಲಿಗೆ ಮಾಡಿದ್ದಾರೆ. ನನ್ನಿಂದ ಹಣ ವಸೂಲಿ ಮಾಡಿರುವವರ ಹೆಸರುಗಳ ಪಟ್ಟಿ ಕೊಡುತ್ತೇನೆ. ಇದಕ್ಕೆ ಅಗತ್ಯವಾದ ಮಾಹಿತಿ ಮತ್ತು ದಾಖಲೆಗಳೂ ನನ್ನ ಬಳಿ ಇವೆ.

ಅವುಗಳನ್ನೂ ಸಂಬಂಧಪಟ್ಟ ಅಧಿಕಾರಿಗಳಿಗೆ ಒಪ್ಪಿಸುತ್ತೇನೆ. ಸುಲಿಗೆಕೋರರಿಂದ ಹಣ ವಾಪಸ್ ಪಡೆಯಬೇಕು. ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪೊಲೀಸರಿಗೆ ಎಲ್ಲ ರೀತಿಯಲ್ಲೂ ಸಹಕರಿಸುತ್ತೇನೆ. ಸದ್ಯ ನನ್ನ ಬಳಿಯಿರುವ ಸ್ತಿರಾಸ್ತಿ ಮತ್ತು ಚರಾಸ್ತಿಯ ಮೊತ್ತವನ್ನು ಲೆಕ್ಕ ಹಾಕುತ್ತಿದ್ದೇನೆ. ಅದನ್ನು ನಗದೀಕರಿಸಬಹುದು. ನನ್ನನ್ನು ಬೆದರಿಸಿ ವಸೂಲಿ ಮಾಡಿರುವವರಿಂದ ಕೋಟ್ಯಂತರ ರೂ. ಬರಬೇಕು. ಇದಕ್ಕಾಗಿ ಕಾನೂನು ಹೋರಾಟ ನಡೆಸುತ್ತೇನೆ. ನ್ಯಾಯಾಲಯದಲ್ಲಿ ನನ್ನ ಪರ ವಾದಿಸಲು ವಕೀಲರುಗಳೇ ಇಲ್ಲ’ ಎಂದು ಹೇಳಿಕೊಂಡಿದ್ದಾನೆ.

ಮತ್ತಷ್ಟು ಆರೋಪಿಗಳ ಶಂಕೆ

ಮನ್ಸೂರ್ ಖಾನ್ ವಿಡಿಯೋದಲ್ಲಿ ಆರೋಪಿಸಿರುವ ಅಂಶಗಳನ್ನು ಎಸ್​ಐಟಿ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ಕಳೆದ ಜೂ.23 ರಂದು ಬಿಡುಗಡೆ ಮಾಡಿದ್ದ ಮೊದಲ ವಿಡಿಯೋವನ್ನು ಆಧರಿಸಿ ಹಲವು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಬಿಡುಗಡೆ ಮಾಡಿರುವ 2ನೇ ವಿಡಿಯೋದಲ್ಲೂ ಕೆಲ ರಾಜಕಾರಣಿಗಳು ಮತ್ತು ಸಮಾಜಘಾತುಕ ಶಕ್ತಿಗಳಿವೆ ಎಂದು ಹೇಳಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಆರೋಪಿಗಳು ಹಗರಣದಲ್ಲಿರುವ ಬಗ್ಗೆ ಎಸ್​ಐಟಿ ಅಧಿಕಾರಿಗಳು ಶಂಕಿಸಿದ್ದಾರೆ.

ಅನುಕಂಪ ಗಿಟ್ಟಿಸುವ ತಂತ್ರ

ಬಹುಕೋಟಿ ವಂಚಿಸಿರುವುದು ಪೊಲೀಸರ ಗಮನಕ್ಕೆ ಬರುತ್ತಿದ್ದಂತೆ, ಬಂಧನದ ಭಯದಿಂದ ಮನ್ಸೂರ್ ರಾತ್ರೋರಾತ್ರಿ ಪರಾರಿಯಾಗಿದ್ದಾನೆ . ಅಷ್ಟು ಸುಲಭವಾಗಿ ಆತ ತಾನಾಗಿಯೇ ವಾಪಸ್ ಬರುವವನಲ್ಲ. ನಾವೇ ಎಳೆದು ತರಬೇಕು. ಈ ನಿಟ್ಟಿನಲ್ಲಿ ಎಲ್ಲ ರೀತಿಯ ಪ್ರಯತ್ನ ನಡೆಯುತ್ತಿದೆ. ಮನ್ಸೂರ್ ಖಾನ್ ಜನರಲ್ಲಿ ಅನುಕಂಪ ಗಿಟ್ಟಿಸಿಕೊಳ್ಳುವ ಉದ್ದೇಶದಿಂದ ಈ ರೀತಿ ವಿಡಿಯೋ ಬಿಡುಗಡೆ ಮಾಡುತ್ತಿದ್ದಾನೆ ಎಂದು ಎಸ್​ಐಟಿ ಅಧಿಕಾರಿಯೊಬ್ಬರು ವಿಜಯವಾಣಿಗೆ ತಿಳಿಸಿದ್ದಾರೆ.

ಕುಟುಂಬ ನೆನೆದು ಕಣ್ಣೀರು

ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆ ಗಂಭೀರವಾಗಿದೆ. ಹೀಗಾಗಿ ದೇಶಕ್ಕೆ ಬರಲು ಸಾಧ್ಯವಾಗಿಲ್ಲ. ನನ್ನ ಕುಟುಂಬ ಯಾವ ಸ್ಥಿತಿಯಲ್ಲಿದೆ ಎಂಬುದೂ ನನಗೆ ಗೊತ್ತಿಲ್ಲ ಎಂದು ಕಣ್ಣೀರಿಟ್ಟಿದ್ದಾನೆ. ಅಶೀಘ್ರವಾಗಿ ದೇಶಕ್ಕೆ ಮರಳಲು ಸಿದ್ಧತೆ ನಡೆಸುತ್ತಿರುವುದಾಗಿ ವಿಡಿಯೋದಲ್ಲಿ ಹೇಳಿದ್ದಾನೆ.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...