More

    ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಗಳಿಗೆ ಮೀಸಲಾತಿ ಕಲ್ಪಿಸುವಂತೆ ಮನವಿ

    ಬೆಳಗಾವಿ: ಗ್ರಾಪಂ ಮಾದರಿಯಲ್ಲಿಯೇ ಸಹಕಾರಿ ಸಂಘ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಗಳಿಗೆ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಬುಧವಾರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಕಾರ್ಯಕರ್ತರು ಪ್ರತಿಭಟಿಸಿ, ಡಿಸಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.

    ರಾಜ್ಯದ ವಿವಿಧ ಜಿಲ್ಲೆಗಳ ಸಹಕಾರಿ ಸಂಘ ಸಂಸ್ಥೆಗಳಲ್ಲಿ ಮೀಸಲಾತಿ ಆಧಾರದ ಮೇಲೆ ಸದಸ್ಯರ ಆಯ್ಕೆ ನಡೆದಿದೆ. ಆದರೆ, ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಇಲ್ಲ. ಪರಿಣಾಮ ಆರ್ಥಿಕವಾಗಿ ಬಲಿಷ್ಠರಾಗಿರುವವರು, ಪ್ರಭಾವಿ ವ್ಯಕ್ತಿಗಳು ಅಧ್ಯಕ್ಷ, ಉಪಾಧ್ಯಕ್ಷರಾಗುತ್ತಿದ್ದಾರೆ. ಇದರಿಂದ ಎಸ್‌ಸಿ, ಎಸ್‌ಟಿ, ಹಿಂದುಳಿದ, ಮಧ್ಯಮ ವರ್ಗದ ಸದಸ್ಯರು ಅಧ್ಯಕ್ಷ ಸ್ಥಾನದಿಂದ ವಂಚಿತರಾಗುತ್ತಿದ್ದಾರೆ ಎಂದು ಕಾರ್ಯಕರ್ತರು ದೂರಿದರು.

    ಈಗಾಗಲೇ ರಾಜ್ಯ ಸರ್ಕಾರ ಗ್ರಾಪಂ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಘೋಷಿಸಿ ಅದರಂತೆ ಆಯ್ಕೆ ಮಾಡುತ್ತಿದೆ. ಅದೇ ಮಾದರಿಯನ್ನು ಸಹಕಾರಿ ಸಂಘ ಸಂಸ್ಥೆಗಳಿಗೆ ಕಲ್ಪಿಸಿದರೆ ಎಲ್ಲ ವರ್ಗದ ಸಮುದಾಯವರಿಗೆ ನ್ಯಾಯ ಕಲ್ಪಿಸಿಕೊಟ್ಟಂತಾಗುತ್ತದೆ. ಹಾಗಾಗಿ ಸರ್ಕಾರ ತಕ್ಷಣ ಮೀಸಲಾತಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

    ಜಿಲ್ಲಾ ಸಮಿತಿ ಮುಖಂಡರಾದ ಶಂಕರ ದೊಡಮನಿ, ಯಲ್ಲಪ್ಪ ಹುದಲಿ, ಯಲ್ಲೇಶ ಬಚ್ಚಲಪುರಿ, ಶಿವಶಂಕರ ಸೂರ್ಯವಂಶಿ, ಬಸವರಾಜ ಕೋಲಕಾರ, ಸುಲೇಮಾನ ಜಮಾದಾರ, ರಾಜು ಸತ್ತಿಗೇರಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts