More

    ಶಾಲೆಗಳ ಅಭಿವೃದ್ಧಿಗೆ ಎಸ್‌ಡಿಎಂಸಿ ಸಹಕಾರ ಅಗತ್ಯ

    ಐಮಂಗಲ: ಸಮುದಾಯ ಮತ್ತು ಶಾಲಾಭಿವೃದ್ಧಿ ಸಮಿತಿ ಸಹಕಾರವಿದ್ದರೆ ಎಲ್ಲ ಶಾಲೆಗಳಲ್ಲೂ ಗುಣಾತ್ಮಕ ಶಿಕ್ಷಣದ ಜತೆಗೆ ಶಾಲೆಯ ಪ್ರಗತಿಯೂ ಸಾಧ್ಯವಾಗುತ್ತದೆ ಎಂದು ಮುಖ್ಯಶಿಕ್ಷಕಿ ಪಿ.ಎನ್.ಮಂಜುಳಾ ಹೇಳಿದರು.

    ಹೋಬಳಿಯ ಪಾಲವ್ವನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.

    ಶಾಲೆಯಲ್ಲಿ ಶಿಕ್ಷಕರು ಮಕ್ಕಳ ಸರ್ವಾಂಗೀಣ ಪ್ರಗತಿಗಾಗಿ ಶ್ರಮಿಸುತ್ತಿದ್ದಾರೆ. ಈ ಪ್ರಕ್ರಿಯೆ ಮನೆಯಲ್ಲೂ ಮುಂದುವರಿದರೆ ಶೈಕ್ಷಣಿಕ ಪ್ರಗತಿ ಸಾಧ್ಯವಾಗುತ್ತದೆ. ಇದಕ್ಕೆ ಪಾಲಕರು ಸಹಕರಿಸಬೇಕು ಎಂದು ತಿಳಿಸಿದರು.

    ಎಸ್‌ಡಿಎಂಸಿ ಅಧ್ಯಕ್ಷ ದಾದಾಪೀರ್ ಮಾತನಾಡಿ, ಶಿಕ್ಷಕರು ಮಕ್ಕಳೊಂದಿಗೆ ಸ್ನೇಹಿತರಂತೆ ಇದ್ದು ಗುಣಾತ್ಮಕ ಶಿಕ್ಷಣ ನೀಡಿದ್ದರ ಪರಿಣಾಮ ಕಳೆದ ಸಾಲಿನಲ್ಲಿ 10ನೇ ತರಗತಿಯಲ್ಲಿ ಉತ್ತಮ ಫಲಿತಾಂಶ ಬರಲು ಸಾಧ್ಯವಾಗಿದೆ ಎಂದರು.

    ಶಿಕ್ಷಕರಾದ ಟಿ.ಜೆ.ವೆಂಕಟೇಶ್, ಬಿ.ಬಸಪ್ಪ, ಸಿ.ವಿ.ವಾದಿರಾಜು, ಜೆ.ಬಿ.ಪರಮೇಶ್ವರಪ್ಪ, ಕೆ.ಒ.ಗೀತಾ, ವಾಣಿ, ಕಾಡಪ್ಪಸ್ವಾಮಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ವಿದ್ಯಾರ್ಥಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts