More

    ಪಠ್ಯೇತರ ಚಟುವಟಿಕೆಯಿಂದ ಬುದ್ಧಿ ಚುರುಕು

    ಐಮಂಗಲ: ಶಾಲಾ ಮಕ್ಕಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಬುದ್ಧಿ ಚುರುಕಾಗುತ್ತದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಲ್.ರಮೇಶ್ ಹೇಳಿದರು.

    ಮರಡಿಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸಕಲ ಸೌಕರ್ಯ, ಗುಣಮಟ್ಟದ ಶಿಕ್ಷಣ, ನುರಿತ ಶಿಕ್ಷಕರಿರುವ ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು. ಇದರಿಂದ ಮಕ್ಕಳ ಭವಿಷ್ಯ ಉಜ್ವಲವಾಗುತ್ತದೆ ಎಂದರು.

    ಶಿಕ್ಷಕ ಜಯಣ್ಣ, ವಾರ್ಷಿಕ ವರದಿ ವಾಚಿಸಿದರು. ಮುಖ್ಯಶಿಕ್ಷಕ ಎಂ.ಮನೋಹರ್, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪಿ.ಎನ್.ಕೃಷ್ಣ, ಶಿಕ್ಷಕರಾದ ಟಿ.ಎನ್.ರಾಧಮ್ಮ, ದೇವೇಂದ್ರಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts