More

    ರಾಜ್ಯದ ಹಲವೆಡೆ ವರ್ಷದ ಮೊದಲ ತುಂತುರು ಮಳೆ; ಚಳಿ ಮತ್ತು ಮಳೆಯ ಮುನ್ಸೂಚನೆ ನೀಡಿದ್ದ ಹವಾಮಾನ ಇಲಾಖೆ..!

    ರಾಜ್ಯದಲ್ಲಿ ಕೆಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದೆ.

    ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಕಾಣಿಸಿಕೊಂಡಿರುವ ಹಿನ್ನೆಲೆ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಉತ್ತರ ಕನ್ನಡ ಕರಾವಳಿಯಲ್ಲಿ ದಿಢೀರ್ ವರುಣನ ಆಗಮನವಾಗಿದ್ದು, ಕಾರವಾರದಲ್ಲಿ ಮುಂಜಾನೆಯಿಂದಲೂ ಮಳೆಯಾಗುತ್ತಿದೆ.

    ಶಾಲೆ, ಕೆಲಸಕ್ಕೆ ತೆರಳುವವರಿಗೆ ಮಳೆರಾಯ ಅಡಿಪಡಿಸಿದ್ದಾನೆ. ಕಾರವಾರ, ಅಂಕೋಲ, ಕುಮಟಾ ಸೇರಿ ಹಲವು ತಾಲೂಕುಗಳಲ್ಲಿ ಮಳೆ ಸುರಿಯುತ್ತಿದೆ. ಬುಧವಾರದಿಂದ ಹಲವು ತಾಲೂಕುಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವು ಕಡೆ ಮಳೆಯ ಸಿಂಚನವಾಗಿದೆ.

    ಕಳೆದ ಎರಡು ದಿನಗಳಿಂದ ಕೊಂಚ ಮೋಡ ಮುಸುಕಿದ, ಬಿಸಿಲು ಆವರಿಸಿದ ವಾತಾವರಣ ಇತ್ತು. ಇಂದು ಮುಂಜಾನೆಯಿಂದ ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದೆ.

    ಹವಾಮಾನ ಇಲಾಖೆ ರಾಜ್ಯದ ಹಲವೆಡೆ ಶೀತಗಾಳಿ ಮಳೆ ಮುನ್ಸೂಚನೆ ನೀಡಿದ್ದು, ಶಿವಮೊಗ್ಗದಲ್ಲಿ ಮುಂಜಾನೆಯಿಂದ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಜಿಟಿಜಿಟಿ ಮಳೆ ಆರಂಭಗೊಂಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts