More

    ಕರ್ನಾಟಕದಲ್ಲಿ ತಾಪಮಾನ ತೀವ್ರ ಏರಿಕೆ; 2-3 ಡಿ.ಸೆ. ಹೆಚ್ಚಳ ಸಾಧ್ಯತೆ, ಹವಾಮಾನ ಇಲಾಖೆ ಮುನ್ನೆಚ್ಚರಿಕೆ

    ಬೆಂಗಳೂರು: ರಾಜ್ಯದಲ್ಲಿ ಜನತೆ ಈಗಾಗಲೇ ಭೀಕರ ಬರದಿಂದ ತತ್ತರಿಸಿದ್ದಾರೆ. ಏತನ್ಮಧ್ಯೆ ಭಾರತ ಹವಾಮಾನ ಇಲಾಖೆ (ಐಎಂಡಿ) ಮಾ. 29. ರಿಂದ ಏ.04ರವರೆಗೆ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವಾಮಾನವು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ ಎಂದು ತಿಳಿಸಿದೆ.

    ಅಷ್ಟೇ ಅಲ್ಲ, ಇನ್ನು ಎರಡು ದಿನಗಳ ಕಾಲ ವಿಜಾಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಶಾಖದ ಅಲೆಯು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ ಮೂರು ದಿನಗಳಲ್ಲಿ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಉಷ್ಣ ಮಾರುತ ಬೀಸಲಿದ್ದು, ಗರಿಷ್ಠ ತಾಪಮಾನದಲ್ಲಿ 2ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

    ಬೆಂಗಳೂರಿನಲ್ಲೂ ಮುಂದಿನ ಐದು ದಿನ ಗರಿಷ್ಠ ತಾಪಮಾನ 36 ಡಿ.ಸೆ. ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಇಂದು ಕೂಡ ಕಲಬುರಗಿ, ಬಾಗಲಕೋಟೆ, ಬೀದರ್‌ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಉಷ್ಣ ಮಾರುತ ಇರುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

    ಮಾರ್ಚ್ 28ರಂದು ದಾಖಲಾದ ತಾಪಮಾನ
    ರಾಯಚೂರು ಜಿಲ್ಲೆಯ ಹಡಗನಹಾಳ್‌ ಹೋಬಳಿಯಲ್ಲಿ 42.6 ಡಿ.ಸೆ. ತಾಪಮಾನ ದಾಖಲಾಗಿದೆ. ಕಲಬುರಗಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ವಿಜಯಪುರ, ಬೀದರ್‌, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ 41 ಡಿ.ಸೆ.ನಿಂದ 42.6 ಡಿ.ಸೆ. ತಾಪಮಾನ ದಾಖಲಾಗಿದೆ. 

    ‘ಎಲ್‌ ನಿನೋ’ ಪ್ರಭಾವದಿಂದ ತಾಪಮಾನ ಅಧಿಕವಾಗಿದೆ. ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ಉಷ್ಣಾಂಶ ಅಧಿಕವಾಗಿರಲಿದೆ. ಕೆಲವು ಕಡೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಕೂಡ ಇದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

    ತಾಪಮಾನ ಏರಿಕೆ; ಉತ್ತರ ಕರ್ನಾಟಕ ಭಾಗದ 4 ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದ ಐಎಂಡಿ

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts