ಕೋಲಾರ: ಜಿಲ್ಲೆಯಲ್ಲಿ ಮತ್ಸ್ಯ ಸಂಪದ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಹೇಳಿದರು.
ನಗರ ಹೊರಲಯವದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯ ಅನುಷ್ಠಾನ ಕುರಿತು ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಸರ್ಕಾರದಿಂದ ಜಾರಿಗೆ ತಂದಿರುವ ಯೋಜನೆಯ ಕುರಿತು ವ್ಯಾಪಕ ಪ್ರಚಾರಪಡಿಸಬೇಕು ಎಂದರು.
ಯೋಜನೆಯ ಸೌಲಭ್ಯ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ದೊರೆಯಬೇಕು. ಮೀನು ಸಂಪತ್ತನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಮೀನುಗಾರಿಕೆ ಇಲಾಖೆಯಿಂದ ಮೀನುಗಳ ಉತ್ಪಾದನೆ, ಉತ್ಪಾದಿಸಿದ ಮೀನು ಮರಿಗಳನ್ನು ಕೆರೆಗಳಿಗೆ ಬಿತ್ತನೆ ಮಾಡುವುದು, ಹೆಚ್ಚಿನ ಮೀನು ಉತ್ಪಾದನೆಗೆ ತಾಂತ್ರಿಕ ಸಲಹೆಗಳನ್ನು ನೀಡುವ ಮೂಲಕ ಮೀನುಗಾರಿಕೆಯನ್ನು ಅಭಿವೃದ್ಧಿಪಡಿಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿಯಾದ ಶಾಂತರಾಜು, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಅನಂತು ಮತಿತರರು ಹಾಜರಿದ್ದರು.