More

    ಕಾಲಮಿತಿಯಲ್ಲಿ ಸರ್ಕಾರಿ ಯೋಜನೆಗಳ ಅನುಷ್ಠಾನವಾಗಲಿ

    ಪಾಂಡವಪುರ : ಬರ ಹಿನ್ನೆಲೆಯಲ್ಲಿ ರೈತರು ಮತ್ತು ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸುವ ಜತೆಗೆ ಕಾಲಮಿತಿಯಲ್ಲಿ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುವಂತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ ಬರ ಪರಿಹಾರ ಸಮಿತಿ ಹಾಗೂ ಟಾಸ್ಕ್‌ಫೋರ್ಸ್ ಅಧಿಕಾರಿಗಳ ಸಭೆ ನಡೆಸಿ ಅಧಿಕಾರಿಗಳಿಂದ ತಾಲೂಕಿನ ಬರ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.

    ತಾಲೂಕಿನಾದ್ಯಂತ ಬರ ಪರಿಸ್ಥಿತಿ ಇರುವ ಕಾರಣ ಜನ-ಜಾನುವಾರುಗಳಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ತಾಲೂಕಿನ ಪ್ರತಿ ಗ್ರಾಮಗಳಲ್ಲೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಜಾನುವಾರುಗಳಿಗೆ ಮೇವಿಗೆ ತೊಂದರೆಯಗದಂತೆ ಅಗತ್ಯ ಯೋಜನೆಗಳನ್ನು ರೂಪಿಸಿ ಯಾವುದೇ ಲೋಪವಿಲ್ಲದಂತೆ ನಿರ್ವಹಣೆ ಮಾಡುವಂತೆ ಸಲಹೆ ನೀಡಿದರು.

    ಕುಡಿಯುವ ನೀರಿಗೆ ತೊಂದರೆಯಾಗದಂತೆ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ಪಡೆದು ನೀರಿನ ಅವಶ್ಯಕತೆ ಪೂರೈಸಬೇಕು. ಅನಿವಾರ್ಯವಾದಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜಿಗೆ ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳಿಗೆ ಸಕಾಲದಲ್ಲಿ ಪಿಂಚಣಿ ತಲುಪುವಂತೆ ನೋಡಿಕೊಳ್ಳಬೇಕು. ಸಂಧ್ಯಾ ಸುರಕ್ಷಾ, ವಿಧವಾ, ಮನಸ್ವಿನಿ, ಅಂಗವಿಕಲತೆ ಸೇರಿದಂತೆ ವಿವಿಧ ಯೋಜನೆಗಳಡಿ ಬರುವ ಅರ್ಹ ಹೊಸ ಫಲಾನುವಭವಿಗಳನ್ನು ಗುರುತಿಸಿ ಸೇರ್ಪಡೆಗೊಳಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಬರದ ಸೂಕ್ಷ್ಮತೆ ಅರಿತು ಪ್ರತಿಯೊಬ್ಬ ಅಧಿಕಾರಿಗಳು ಕೆಲಸ ಮಾಡಬೇಕು. ಇಲ್ಲವಾದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ತಹಸೀಲ್ದಾರ್ ಜಿ.ಎಸ್.ಶ್ರೇಯಸ್, ತಾಪಂ ಇಒ ಲೋಕೇಶ್‌ಮೂರ್ತಿ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ಮಂಜುನಾಥ್, ಶಿರಸ್ತೇದಾರ್ ಮೋಹನ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts