More

    ಮಹಿಳೆಯರ ಹಿತಕ್ಕಾಗಿ ಜಲ ಜೀವನ್ ಮಿಷನ್ ಜಾರಿ

    ಬೇಲೂರು: ಗ್ರಾಮೀಣ ಭಾಗದ ಮಹಿಳೆಯರ ಹಿತದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ಜಲ ಜೀವನ ಮಿಷನ್ ಯೋಜನೆಯಡಿ ಕುಡಿಯುವ ನೀರು ಕೊಡುವ ಮಹತ್ತರ ಯೋಜನೆ ತಂದಿದ್ದಾರೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.

    ತಾಲೂಕಿನ ಅರೇಹಳ್ಳಿ ನಾರ್ವೆ ಗ್ರಾಮ ಪಂಚಾಯಿತಿಯ ನಾರ್ವೆ ಹಾಗೂ ಸುಲಗಳಲೇ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಹಾಸನ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಜಲ ಜೀವನ್ ಮಿಷನ್ ಯೋಜನೆಗೆ ಭಾನುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
    ಜಲ ಜೀವನ್ ಮಿಷನ್ ಕೇಂದ್ರ ಸರ್ಕಾರದ ಮಹತ್ತರವಾದ ಯೋಜನೆಯಾಗಿದೆ. ಜತೆಗೆ ಸಾರ್ವಜನಿಕರು ನೀರಿನ ಮಹತ್ವ ಅರಿತು ಮತ್ತು ನೀರು ವ್ಯಯ ಆಗದಂತೆ ಎಚ್ಚರ ವಹಿಸಬೇಕಿದೆ. ಇಂತಹ ಯೋಜನೆಯ ಸದುಪಯೋಗವನ್ನು ಜನರು ಪಡೆದುಕೊಳ್ಳಬೇಕು ಹಾಗೂ ಈ ಬಾಗದಲ್ಲಿ ಹಲವಾರು ಸಮಸ್ಯೆಗಳಿದ್ದು, ಅವುಗಳನ್ನು ಹಂತ ಹಂತವಾಗಿ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

    ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲಾಶ್ರೀ, ಉಪಾಧ್ಯಕ್ಷ ಮಲ್ಲಿಕಾರ್ಜುನ ಸುಲಗಳಲೇ ಎಇಇ ರಂಜಿತಾ. ತಾಪಂ ಎ.ಡಿ. ಗುರುಪ್ರಸಾದ್, ಸದಸ್ಯರಾದ ಮಲ್ಲಿಕಾರ್ಜುನ ನಾರ್ವೆ, ಚಿದಾನಂದ್, ಬೇಬಿ ಪ್ರಕಾಶ್, ಪವಿತ್ರಾ, ವೀಣಾ. ಮಂಜುನಾಥ್, ತಾಪಂ ಮಾಜಿ ಸದಸ್ಯ ಸೋಮಯ್ಯ, ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣೇಗೌಡ, ಪಿಡಿಒ ಚಂದ್ರಯ್ಯ, ಕಾರ್ಯದರ್ಶಿ ಚಾಮರಾಜ್ ಸೇರಿದಂತೆ ಗ್ರಾಮಸ್ಥರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts