ರಾಮನಗರ ಮತ್ತೆ 'ಬೆಂಗಳೂರು ದಕ್ಷಿಣ' ಜಿಲ್ಲೆಯಾಗಿ ಮರುನಾಮಕರಣ: ಸಂಪುಟ ಸಭೆಯಲ್ಲಿ ನಿರ್ಧಾರ | Cabinet Meeting

dk - 2025-05-22T161222.555
Published on

ಬೆಂಗಳೂರು: ಮೇ.22ರಂದು (ಗುರುವಾರ) ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ(Cabinet Meeting) ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲಾಗಿದೆ.

2024ರ ಜುಲೈನಲ್ಲಿ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿತ್ತು. ನಂತರ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಅನುಮೋದನೆಗಾಗಿ ಮನವಿ ಸಲ್ಲಿಸಿತ್ತು. ಸಕರಾತ್ಮಾಕವಾಗಿ ಸ್ಪಂದಿಸಿಲ್ಲ ಎಂದು ರಾಜ್ಯ ಸಚಿವರು ಆರೋಪಿಸಿದ್ದರು.

ಇದೀಗ ರಾಜ್ಯ ಸರ್ಕಾರವು ಗುರುವಾರದ ಸಂಪುಟ ಸಭೆಯ ಕಾರ್ಯಸೂಚಿಯಲ್ಲಿ ಈ ವಿಷಯವನ್ನು ಸೇರ್ಪಡೆಗೊಳಿಸಿದ್ದು, ನಿರ್ಧಾರ ಕೈಗೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net