ಹೆಬ್ರಿ: ಮೊಬೈಲ್ ಇಂದು ಜೀವನದ ಅವಿಭಾಜ್ಯ ಅಂಗ. ಕಾಲ ಬದಲಾದಂತೆ ಒಗ್ಗಿಕೊಳ್ಳುವುದು ತಪ್ಪಲ್ಲ. ಆದರೆ ನಮ್ಮ ಮೂಲ ಉದ್ದೇಶ ಶೈಕ್ಷಣಿಕ ಸಾಧನೆ ಹಾಗೂ ಬದುಕು ಕಟ್ಟಿಕೊಳ್ಳುವುದಾಗಿರಬೇಕು. ಇಂತಹ ವೇದಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ಬೆಳವಣಿಗೆಗೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ನಿವೃತ್ತ ಪ್ರಾಂಶುಪಾಲ ಶ್ರೀವರ್ಮ ಅಜ್ರಿ ಹೇಳಿದರು.
ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಸಾಂಸ್ಕೃತಿಕ ವೇದಿಕೆ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಶನಿವಾರ ಮಾತನಾಡಿದರು.
ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಚ್.ಜನಾರ್ದನ್ ಅವರನ್ನು ಸನ್ಮಾನಿಸಲಾಯಿತು. ವಿಶ್ವವಿದ್ಯಾಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಪ್ರಾಂಶುಪಾಲ ಡಾ.ವಿದ್ಯಾದರ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯರಾದ ನರೇಂದ್ರ ನಾಯಕ್, ಐಕ್ಯೂಎಸಿ ಕೋ ಆರ್ಡಿನೇಟರ್ ಡಾ.ಗಣೇಶ್ ಎಸ್., ಸಾಂಸ್ಕೃತಿಕ ಸಮಿತಿ ಸಂಚಾಲಕಿ ಜ್ಯೋತಿ, ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಸಲಹೆಗಾರ ಡಾ.ಪ್ರವೀಣ್ ಕುಮಾರ್ ಎಸ್., ಉಪನ್ಯಾಸಕರು, ಸಿಬ್ಬಂದಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಶ್ರೀಲತಾ ನಿರೂಪಿಸಿದರು. ಶ್ವೇತಾ ಸ್ವಾಗತಿಸಿ, ಚಂದ್ರಿಕಾ ವಂದಿಸಿದರು.