ಸರ್ಕಾರಿ ಶಾಲೆಗಳ ಉಳಿವಿನಲ್ಲಿ ಪ್ರಮುಖ ಪಾತ್ರ

byn (3)
Published on

ವಿಜಯವಾಣಿ ಸುದ್ದಿಜಾಲ ಬೈಂದೂರು

ಸರ್ಕಾರಿ ಶಾಲೆಗಳಿಗಿಂತ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿ ಸಂಖ್ಯೆ ಹೆಚ್ಚಳ, ಗುಣಮಟ್ಟದ ಶಿಕ್ಷಣ, ಫಲಿತಾಂಶಗಳಲ್ಲಿ ಅಭಿವೃದ್ಧಿ ಹೊಂದುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳ ಉಳಿವಿಗಾಗಿ ಕೆಲವು ಪ್ರಾವಾಣಿಕ ಶಿಕ್ಷಕರು ಹೋರಾಡುತ್ತಿದ್ದಾರೆ. ಅವರಿಂದಾಗಿಯೇ ಕೆಲವು ಶಾಲೆಗಳು ಉಳಿದಿವೆ. ಅವರ ಸೇವೆ, ಕಾರ್ಯ ಶ್ಲಾನೀಯ ಎಂದು ಬೈಂದೂರು ಶಾಸಕ ಗುರುರಾಜ ಗಂಟೆಹೊಳೆ ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೆೇರಿ, ಬೈಂದೂರು ಕ್ಷೇತ್ರ ಸಂಪನ್ಮೂಲ ಕೇಂದ್ರ ವತಿಯಿಂದ ಶುಕ್ರವಾರ ಸೇಂಟ್ ಥಾಮಸ್ ಆಂಗ್ಲ ವಾಧ್ಯಮ ಶಾಲೆಯಲ್ಲಿ ಬೈಂದೂರು ವಲಯದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ವಾತನಾಡಿದರು.

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶ್ರಮಿಸಿರುವ ಎಲ್ಲ ನಿವೃತ್ತ ಶಿಕ್ಷಕರಿಗಾಗಿ ಸೆ.21ರಂದು ನಿವೃತ್ತ ಶಿಕ್ಷಕರ ದಿನಾಚರಣೆ ಆಚರಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಬೈಂದೂರು ವಲಯದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗಾಗಿ ನಡೆದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುವಾನ ವಿತರಿಸಲಾಯಿತು.

ತಹಸೀಲ್ದಾರ್ ರಾಮಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಸೇಂಟ್ ಥಾಮಸ್ ಆಂಗ್ಲ ವಾಧ್ಯಮ ಶಾಲೆ ಪ್ರಾಂಶುಪಾಲ ಫಿಲಿಪ್ ನೆಲ್ಲಿವಿಲ್ಲಾ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಜಯಕುವಾರ್ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂ, ರಾಜ್ಯ ಸರ್ಕಾರಿ ನೌಕರರ ಸಂ ಅಧ್ಯಕ್ಷ ಶೇಖರ ಪೂಜಾರಿ, ಪ್ರೌಢಶಾಲಾ ಶಿಕ್ಷಕರ ಸಂ ಅಧ್ಯಕ್ಷ ಸದಾನಂದ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂ ಅಧ್ಯಕ್ಷ ಜಯಾನಂದ ಪಟಗಾರ್, ಜಿಪಿಟಿ ಶಿಕ್ಷಕರ ಸಂ ಅಧ್ಯಕ್ಷೆ ಸಾರಿಕಾ, ದೈಹಿಕ ಶಿಕ್ಷಣ ಶಿಕ್ಷಕರ ಸಂ ಅಧ್ಯಕ್ಷ ಮಂಜುನಾಥ ಶೆಟ್ಟಿ, ಶಾಲಾ ಶಿಕ್ಷಣ ಇಲಾಖೆ ನೌಕರರ ಸಂ ಅಧ್ಯಕ್ಷ ವಿಶ್ವನಾಥ ಪೂಜಾರಿ, ಭಡ್ತಿ ಹೊಂದಿದ ಪ್ರೌಢ ಶಾಲಾ ಸಹ ಶಿಕ್ಷಕರ ಸಂ ಅಧ್ಯಕ್ಷ ಕೇಶವ ನಾಯಕ್, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂ ಅಧ್ಯಕ್ಷ ಮಂಜುನಾಥ ದೇವಾಡಿಗ, ರತ್ತು ಬಾ ಜನತಾ ಪ್ರೌಢಶಾಲೆ ಮುಖ್ಯಶಿಕ್ಷಕ ಆನಂದ ಮದ್ದೋಡಿ ಇದ್ದರು.

ಪ್ರಭಾರ ಸಮನ್ವಯ ಅಧಿಕಾರಿ ಪ್ರದೀಪ್‌ಕುವಾರ್ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ಕೆ.ನಾಯಕ್ ಪ್ರಾಸ್ತಾವಿಕವಾಗಿ ವಾತನಾಡಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಂಜುನಾಥ ನಾಯಕ್ ವಂದಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂದ ಪ್ರಧಾನ ಕಾರ್ಯದರ್ಶಿ ಗಣಪತಿ ಹೋಬಳಿದಾರ್, ರಾಮಕೃಷ್ಣ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net