ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಮಾತುಕತೆಗೆ ನಾನು ಸಿದ್ಧ: ಇಮ್ರಾನ್​ ಖಾನ್​

ಇಸ್ಲಾಮಾಬಾದ್​: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲು ನಾನು ಸಿದ್ಧನಿದ್ದೇನೆ. ಭಯೋತ್ಪಾದಕರು ನಮ್ಮ ನೆಲವನ್ನು ಬಳಸಿಕೊಳ್ಳಲು ನಾವು ಬಿಡುವುದಿಲ್ಲ ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್​ ಖಾನ್​ ತಿಳಿಸಿದ್ದಾರೆ.

ಇಮ್ರಾನ್​ ಖಾನ್​ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿ 100 ದಿನ ಪೂರೈಸಿದ ಹಿನ್ನೆಲೆಯಲ್ಲಿ ಭಾರತೀಯ ಪತ್ರಕರ್ತರ ತಂಡದೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೇನೆಯ ಮೂಲಕ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಿಲ್ಲ. ಮಾತುಕತೆ ಮೂಲಕ ಸಮಸ್ಯೆಯನ್ನು ಬಗೆಹರಿಸಬಹುದು. ಯಾವುದೂ ಅಸಾಧ್ಯವಲ್ಲ. ಪಾಕಿಸ್ತಾನ ಶಾಂತಿಯನ್ನು ಬಯಸುತ್ತದೆ. ಈ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲು ನಾನು ಸಿದ್ಧ ಎಂದು ಅವರು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಪಾಕಿಸ್ತಾನ ತನ್ನ ನೆಲವನ್ನು ಉಗ್ರರು ಬಳಸಿಕೊಳ್ಳಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

ಶಾಂತಿ ಮಾತುಕತೆ ಹಾಗೂ ಭಯೋತ್ಪಾದನೆ ಒಟ್ಟಾಗಿ ಸಾಗಲು ಸಾಧ್ಯವಿಲ್ಲ. ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವುದನ್ನು ಪಾಕಿಸ್ತಾನ ಬಿಡುವವರೆಗೂ ಮಾತುಕತೆ ಅಸಾಧ್ಯ. ಹೀಗಾಗಿ ಪಾಕ್​ನಲ್ಲಿ ನಡೆಯುವ ಸಾರ್ಕ್ ಸಮ್ಮೇಳನದಲ್ಲಿಯೂ ಭಾರತ ಭಾಗಿಯಾಗುವುದಿಲ್ಲ. ಪಾಕಿಸ್ತಾನದ ಆಹ್ವಾನವನ್ನು ಪ್ರಧಾನಿ ಮೋದಿ ಒಪ್ಪಿಕೊಳ್ಳುವುದಿಲ್ಲ. ಕರ್ತಾರ್​ಪುರ ಕಾರಿಡಾರ್ ಹಾಗೂ ದ್ವಿಪಕ್ಷೀಯ ಮಾತುಕತೆಗೆ ಯಾವುದೇ ಸಂಬಂಧವಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್​ ಅವರು ಬುಧವಾರ ಸ್ಪಷ್ಟಪಡಿಸಿದ್ದರು. (ಏಜೆನ್ಸೀಸ್​)

ಪಾಕ್ ಸಾರ್ಕ್​ಗೆ ಭಾರತ ಧಿಕ್ಕಾರ