ಭಾರಿ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ ಪಾಕ್​ ಪ್ರಧಾನಿ ಇಮ್ರಾನ್​ ಖಾನ್​

ಇಸ್ಲಾಮಾಬಾದ್​: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಮತ್ತೊಮ್ಮೆ ಪ್ರಧಾನಿಯಾಗುವ ಅವಕಾಶ ಪಡೆದುಕೊಂಡಿರುವ ನರೇಂದ್ರ ಮೋದಿ ಅವರನ್ನು ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​ ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಇಮ್ರಾನ್​ ಖಾನ್​, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿರುವ ಬಿಜೆಪಿ ಮತ್ತು ಮಿತ್ರಪಕ್ಷಗಳಿಗೆ ಅಭಿನಂದನೆಗಳು. ಭಾರತ ಉಪಖಂಡದಲ್ಲಿ ಶಾಂತಿ ಮತ್ತು ಸೌಹಾರ್ದ ವಾತಾವರಣ ನೆಲೆಸುವಂತೆ ಮಾಡುವ ನಿಟ್ಟಿನಲ್ಲಿ ಎಲ್ಲ ರೀತಿಯ ಸಹಕಾರ ಕೊಡುತ್ತೀರೆಂದು ನಂಬಿದ್ದೇನೆ ಎಂದು ಟ್ವೀಟ್​ ಮಾಡಿದ್ದಾರೆ.

ಪಾಕಿಸ್ತಾನದ ಸಂಸತ್​ ಚುನಾವಣೆಯಲ್ಲಿ ಗೆದ್ದು ಪ್ರಧಾನಿ ಹುದ್ದೆಯಲ್ಲಿ ಕೂತಿದ್ದ ಇಮ್ರಾನ್​ ಖಾನ್​ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದರು. ಇದಕ್ಕೆ ಪ್ರತಿಯಾಗಿ ಇಮ್ರಾನ್​ ಕೂಡ ಟ್ವೀಟ್​ ಮೂಲಕ ಅಭಿನಂದಿಸಿದ್ದಾರೆ.